ಹೊಸದಿಗಂತ ಡಿಜಿಟಲ್ ಡೆಸ್ಕ್:
ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಕನಿಷ್ಠ ಏಳು ಮಾವೋವಾದಿಗಳು ಹತರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಸುಕಿನ ಜಾವ 3 ಗಂಟೆ ಸುಮಾರಿಗೆ ದಕ್ಷಿಣ ಅಬುಜ್‌ಮದ್‌ನ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಾಗ ಮಾವೋವಾದಿಗಳ ವಿರುದ್ಧದ ಕಾರ್ಯಾಚರಣೆಯಲ್ಲಿ ಪೊಲೀಸ್ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಜಂಟಿ ತಂಡ ತೊಡಗಿಸಿಕೊಂಡಿತ್ತು. ಈ ವೇಳೆ 7 ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ.
ನಾರಾಯಣಪುರ, ದಾಂತೇವಾಡ, ಬಸ್ತಾರ್ ಮತ್ತು ಕೊಂಡಗಾಂವ್ ಜಿಲ್ಲೆಗಳ ಜಿಲ್ಲಾ ಮೀಸಲು ಪಡೆ ಸಿಬ್ಬಂದಿ ಮತ್ತು ಸಿಆರ್‌ಪಿಎಫ್ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಂಡಿನ ಚಕಮಕಿ ಬಳಿಕ ಸೇನಾ ಸಮವಸ್ತ್ರದಲ್ಲಿದ್ದ ಏಳು ಮಾವೋವಾದಿಗಳ ಮೃತದೇಹಗಳು ಪತ್ತೆಯಾಗಿವೆ. ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.