ಹೊಸದಿಗಂತ ಡಿಜಿಟಲ್ ಡೆಸ್ಕ್:
ಮದ್ಯ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮತ್ತು ಅವರ ಪುತ್ರ ಚೈತನ್ಯ ಬಘೇಲ್ ಅವರಿಗೆ ಸಂಬಂಧಿಸಿದ ಹಲವಾರು ಸ್ಥಳಗಳ ಮೇಲೆ ED ದಾಳಿ ನಡೆಸಿದೆ.
ಭಿಲಾಯಿಯಲ್ಲಿರುವ ಚೈತನ್ಯ ಬಘೇಲ್ ನಿವಾಸ ಮತ್ತು ರಾಜ್ಯದ ಇತರ ಕಡೆಗಳಲ್ಲಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ದಾಳಿ ನಡೆಸಲಾಗಿದೆ.
ಈ ವಿಚಾರವಾಗಿ ಭೂಪೇಶ್ ಬಘೇಲ್ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದು, ಪರೋಕ್ಷವಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.