ಛತ್ತೀಸಘಡ ಸರ್ಕಾರಕ್ಕೆ ಮುಜುಗರ ತಂದಿಟ್ಟ ಯುವ ಸಮೂಹದ ಬೆತ್ತಲೇ ಪ್ರತಿಭಟನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಛತ್ತೀಸಘಡ ಸರ್ಕಾರ ವಿರುದ್ಧ ಇಂದು ಯುವ ಸಮೂಹ ಬೆತ್ತಲೇ ಪ್ರತಿಭಟನೆ ಮಾಡಿದೆ.

ಮೀಸಲಾತಿ ಅಡಿಯಲ್ಲಿ ಸರ್ಕಾರಿ ನೌಕರಿ ಗಿಟ್ಟಿಸಿಕೊಳ್ಳಲು ನಕಲಿ ಜಾತಿ ಪ್ರಮಾಣ ನೀಡಲಾಗುತ್ತಿದೆ. ಈ ದಂಧೆ ವಿರುದ್ದ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಯುವ ಸಮೂಹಪ್ರತಿಭಟನೆ ಮಾಡಿದೆ.

ವಿಧಾನಸಭಾ ಕಲಾಪ ಆರಂಭಗೊಳ್ಳುತ್ತಿದ್ದಂತೆ ಪ್ರಮುಖ ರಸ್ತೆಗಳಲ್ಲಿ ಹಲವು ಯುವಕರು ಬೆತ್ತಲೇ ಪ್ರತಿಭಟನೆ ಮಾಡಿದ್ದಾರೆ. ಸಚಿವರು, ಶಾಸಕರು ಕಲಾಪದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ರಸ್ತೆಯಲ್ಲಿ ಯುವಕರು ಪ್ರತಿಭಟನೆ ಮಾಡಿದ್ದಾರೆ. ಈ ಪ್ರತಿಭಟನೆ ದೇಶದಲ್ಲೇ ಭಾರಿ ಸುದ್ದಿಯಾಗಿದೆ.

ಛತ್ತೀಸಘಡದಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಳ್ಳುತ್ತಿರುವ ಹಲವು ಪ್ರಕರಣ ಬೆಳಕಿಗೆ ಬಂದಿದೆ. ಈಗಾಗಲೇ ಹಲವು ಹಿರಿಯ ಅಧಿಕಾರಿಗಳು ಅಮಾನತ್ತಾಗಿದ್ದಾರೆ. 2021ರಲ್ಲಿ ಪಿಡಬ್ಲೂಡಿ ಎಂಜಿನಿಯರ್ ಇದೇ ರೀತಿ ನಕಲಿ ಜಾತಿ ಪ್ರಮಾಣಪತ್ರ ನೀಡಿದ ಪ್ರಕರಣದಲ್ಲಿ ಅಮಾನತ್ತಾಗಿದ್ದರು. ಮೀಸಲಾತಿಗಾಗಿ ಹಲವರು ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಉದ್ಯೋಗ ಗಿಟ್ಟಿಸಿಕೊಳ್ಳುತ್ತಿರುವ ದಂಧೆಗೆ ಕಡಿವಾಣ ಹಾಕಲು ಭಾರಿ ಹೋರಾಟ ನಡೆದಿತ್ತು.

ಆದರೆಸರ್ಕಾರ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಹೀಗಾಗಿ ಇದೀಗ ಮತ್ತೆ ಪ್ರತಿಭಟನೆ ಆರಂಭಗೊಂಡಿದೆ. ಆದರೆ ಈ ಬಾರಿ ಬೆತ್ತಲೇ ಪ್ರತಿಭಟನೆ ಕಾರಣ ದೇಶದ ಗಮನ ಸೆಳೆದಿದೆ.

 

ಪೋಸ್ಟರ್, ಬ್ಯಾನರ್ ಹಿಡಿದು ಆಕ್ರೋಶ ಹೊರಹಾಕಿದ್ದಾರೆ. ಇತ್ತ ಸಚಿವರು ವಾಹನ, ಬೆಂಗಾವಲು ವಾಹನ, ಪೊಲೀಸ್ ವಾಹನ ಸಾಗಲು ಅವಕಾಶ ನೀಡಿಲ್ಲ. ವಾಹನದ ಮುಂದೆ ಓಡುತ್ತಾ ಯುವಕರು ಸಾಗಿದ್ದಾರೆ.ಈ ಬೆತ್ತಲೇ ಪ್ರತಿಭಟನೆಯಿಂದ ಸರ್ಕಾರದ ಸಚಿವರು ಮುಜುಗರಕ್ಕೀಡಾಗಿದ್ದಾರೆ. ಸರ್ಕಾರವೂ ಇಕ್ಕಟ್ಟಿಗೆ ಸಿಲುಕಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!