ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿದ್ಯುತ್ ಪ್ರಸರಣ ಘಟಕದಲ್ಲಿ ಅಗ್ನಿ ಅವಘಡವೊಂದು ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ವ್ಯಾಪಿಸಿರುವ ಘಟನೆ ಛತ್ತೀಸ್‌ಗಢದ ಗುಧಿಯಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಭಾರತ್ ಮಾತಾ ಚೌಕ್ ಬಳಿ ನಡೆದಿದೆ.
ಮಾಹಿತಿ ಪ್ರಕಾರ ಗೋದಾಮಿನಲ್ಲಿ ಸಂಗ್ರಹಿಸಲಾಗಿದ್ದ 1,500 ಟ್ರಾನ್ಸ್‌ಫಾರ್ಮರ್‌ಗಳು ಬೆಂಕಿಗೆ ಆಹುತಿಯಾಗಿವೆ. ಈ ಗೋದಾಮಿನಲ್ಲಿ ಸುಮಾರು 6,000 ಪರಿವರ್ತಕಗಳನ್ನು ಸಂಗ್ರಹಿಸಲಾಗಿದೆ ಎಂದು ಹೇಳಲಾಗುತ್ತಿದೆ. ಇದರಿಂದ ವಿದ್ಯುತ್ ಪ್ರಾಧಿಕಾರದ ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಂಡು ಅವ್ಯವಸ್ಥೆ ಉಂಟಾಗಿದೆ.
ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ಬೆಂಕಿ ಕೆನ್ನಾಲಿಗೆ ಎಲ್ಲಾ ಕಡೆ ವ್ಯಾಪಿಸಿದೆ. ಬೆಂಕಿ ಹೆಚ್ಚುತ್ತಿರುವುದನ್ನು ಕಂಡ ಸ್ಥಳೀಯರು ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.