ಛತ್ತೀಸ್‌ಘಡದಲ್ಲಿ ಇಬ್ಬರು ನಕ್ಸಲರ ಎನ್‌ಕೌಂಟರ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯ ಭೇಜಿ ಪ್ರದೇಶದಲ್ಲಿ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ) ಯೋಧರು ಮತ್ತು ನಕ್ಸಲರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲೀಯರು ಹತರಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

“ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲೀಯರು ಹತರಾಗಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಸುನಿಲ್ ಶರ್ಮಾ ಅವರೇ ಸಂಪೂರ್ಣ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದಾರೆ” ಎಂದು ಸುಕ್ಮಾ ಪೊಲೀಸರು ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಇದಕ್ಕೂ ಮೊದಲು ಮೇ 1ರಂದು ಸುಕ್ಮಾ ಜಿಲ್ಲೆಯ ಇಟ್ಟಪಾರಾ ಪ್ರದೇಶದಲ್ಲಿ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಎರಡು ಟಿಪ್ಪರ್ ಟ್ರಕ್‌ಗಳಿಗೆ ನಕ್ಸಲರು ಬೆಂಕಿ ಹಚ್ಚಿದ್ದರು ಎಂದು ಎಸ್ಪಿ ಸುಕ್ಮಾ, ಸುನಿಲ್ ಶರ್ಮಾ ತಿಳಿಸಿದ್ದಾರೆ. ಪುಲ್ಬಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಎಸ್‌ಪಿ ಶರ್ಮಾ ಪ್ರಕಾರ, ಮೂವರು ಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸಿ ಫುಲ್‌ಬಾಗ್ಡಿ ಪೊಲೀಸ್ ಠಾಣೆಗೆ ಕರೆತರಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!