Monday, July 4, 2022

Latest Posts

ಛತ್ತೀಸಗಡ| ಭದ್ರತಾಪಡೆಯ ಎನ್‌ಕೌಂಟರ್‌ಗೆ ಇಬ್ಬರು ನಕ್ಸಲರು ಬಲಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಛತ್ತೀಸಗಡದ ಸುಕ್ಮಾ ಜಿಲ್ಲೆಯಲ್ಲಿ ಮಂಳವಾರ ಭದ್ರತಾಪಡೆ ನಡೆಸಿದ ಎನ್‌ಕೌಂಟರ್‌ಗೆ ಇಬ್ಬರು ನಕ್ಸಲರು ಬಲಿಯಾಗಿದ್ದಾರೆ.

ಈ ಬಗ್ಗೆ ಸುಕ್ಮಾ ಪೊಲೀಸ್‌ ವರಿಷ್ಠಾಧಿಕಾರಿ ಸುನೀಲ್‌ ಶರ್ಮಾ ಮಾಹಿತಿ ನೀಡಿದ್ದು, ‘ನಕ್ಸಲರು ಕನ್ಹೈಗುಡ ಗ್ರಾಮದ ಗೊಂಪಾಡ್‌ ಬಳಿಯ ಅರಣ್ಯ ಪ್ರದೇಶದಲ್ಲಿ ಅಡಗಿರುವ ಬಗ್ಗೆ ಮಾಹಿತಿ ದೊರಕಿತು. ಈ ಮಾಹಿತಿ ಆಧರಿಸಿ ಡಿಆರ್‌ಜಿ, ಸಿಆರ್‌ಪಿಎಫ್‌ ಮತ್ತು ಕೋಬ್ರಾ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿದವು. ಈ ವೇಳೆ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ದಾಳಿ ನಡೆದಿದೆ’ ಎಂದು ತಿಳಿಸಿದ್ದಾರೆ.

ಗುಂಡಿನ ಚಕಮಕಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಹಲವು ನಕ್ಸಲರು ಗಾಯಗೊಂಡಿದ್ದಾರೆ. ಮೃತರ ಗುರುತು ಪತ್ತೆ ಹಚ್ಚಲಾಗುತ್ತಿದ್ದು, ಒಬ್ಬನನ್ನು ಕೊಂಟಾ ಪ್ರದೇಶದಲ್ಲಿ ಸಕ್ರಿಯವಾಗಿರುವ ನಕ್ಸಲ್‌ ಗುಂಪಿನ ಕಮಾಂಡರ್‌ ಕವಾಸಿ ಹುಂಗಾ ಆಗಿರಬಹುದೆಂದು ಶಂಕಿಸಲಾಗಿದೆ ಎಂದರು.

ಘಟನಾ ಸ್ಥಳದಲ್ಲಿ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದ್ದು, ಶೋಧ ಕಾರ್ಯ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss