ಛಾವಾ ಸಿನಿಮಾ ಎಫೆಕ್ಟ್‌: ಔರಂಗಜೇಬ್‌ ಸಮಾಧಿ ಕೆಡವಲು ಜನರಿಂದ ಹೆಚ್ಚಿದ ಒತ್ತಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮೊಘಲ್ ಚಕ್ರವರ್ತಿ ಔರಂಗಜೇಬನ ಸಮಾಧಿಯನ್ನು ಕೆಡವಬೇಕೆಂದು ಒತ್ತಾಯಿಸಿ ಹಿಂದೂಪರ ಸಂಘಟನೆಗಳು ಆರಂಭಿಸಿರುವ ಅಭಿಯಾನಕ್ಕೆ ಬೆಂಬಲ ಹೆಚ್ಚುತ್ತಿದೆ.

ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳ ನೇತೃತ್ವದ ಬಲಪಂಥೀಯ ಸಂಘಟನೆಗಳು ಮೊಘಲ್ ಚಕ್ರವರ್ತಿ ಔರಂಗಜೇಬನ ಸಮಾಧಿಯನ್ನು ಕೆಡವಬೇಕೆಂದು ಒತ್ತಾಯಿಸಿ ‘ಬಾಬರಿ ಮಸೀದಿ ಮಾದರಿಯ’ ಆಂದೋಲನವನ್ನು ಪ್ರಾರಂಭಿಸಿವೆ. ಛಾವಾ ಸಿನಿಮಾದಲ್ಲಿ ಔರಂಗಜೇಬ್‌ ಕ್ರೂರತೆಯ ದರುಶನವಾಗಿದ್ದು, ಜನರು ಇನ್ನಷ್ಟು ಗಟ್ಟಿಯಾಗಿ ತಮ್ಮ ಕೂಗನ್ನು ಸರ್ಕಾರಕ್ಕೆ ತಲುಪಿಸಲು ಮುಂದಾಗಿದ್ದಾರೆ.

ಇದಕ್ಕೆ ಇಂಬು ನೀಡುವಂತೆ ಆಡಳಿತರೂಢ ಬಿಜೆಪಿ ನಾಯಕರು ಮತ್ತು ಶಿವಸೇನೆ ನಾಯಕ ಹಾಗೂ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸೇರಿದಂತೆ ಹಲವಾರು ನಾಯಕರು ಈ ಬೇಡಿಕೆಯನ್ನು ಬೆಂಬಲಿಸಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿಯೂ ಈ ವಿಷಯ ಭಾರಿ ಚರ್ಚೆಗೆ ಗ್ರಾಸವಾಗಿತ್ತು.

ಈಗಾಗಲೇ ಹಿಂದೂಪರ ಸಂಘಟನೆಗಳು ಔರಂಗಜೇಬ್ ಸಮಾಧಿಯನ್ನು ಸರ್ಕಾರ ಕೆಡವಬೇಕು.. ಇಲ್ಲವಾದಲ್ಲಿ ಆ ಕೆಲಸವನ್ನು ಕರಸೇವಕರು ಮಾಡುತ್ತಾರೆ ಎಂದು ಎಚ್ಚರಿಕೆ ನೀಡಿದೆ. ಅಲ್ಲದೆ ಈ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಗಡುವು ಕೂಡ ನೀಡಿದ್ದಾರೆ. ಹಿಂದೂ ಜನಜಾಗೃತಿ ಸಮಿತಿ ಸಮಾಧಿಯ ನಿರ್ವಹಣೆಗೆ ಹಣಕಾಸಿನ ನೆರವು ನಿಲ್ಲಿಸುವಂತೆ ಸರ್ಕಾರವನ್ನು ಆಗ್ರಹಿಸಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!