ಬೀದಿನಾಯಿಗಳಿಗೆ ಚಿಕನ್ ರೈಸ್ ಭಾಗ್ಯ: ಕೊನೆಗೂ ಸ್ಪಷ್ಟನೆ ನೀಡಿದ BBMP

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೀದಿನಾಯಿಗಳಿಗೆ ಚಿಕನ್ ರೈಸ್ (Chicken Rice) ಭಾಗ್ಯದ ಕುರಿತು ಬಿಬಿಎಂಪಿ (BBMP) ಅಧಿಕೃತವಾಗಿ ಸ್ಪಷ್ಟಿಕರಣ ನೀಡಿದೆ.

ಬೀದಿ ನಾಯಿಗಳಿಗೆ ವಿಶೇಷವಾಗಿ ತಯಾರಿಸಿದ ಭಕ್ಷ್ಯನೀಡುತ್ತಿಲ್ಲ, ಮಾನವ ಗುಣಮಟ್ಟದ ಆಹಾರವನ್ನು ಬೀದಿ ನಾಯಿಗಳಿಗೆ ನೀಡುವುದಿಲ್ಲ, ನಾಯಿ ದರ್ಜೆಯ ಆಹಾರ ನೀಡಲಾಗುವುದು, ಟೆಂಡರ್‌ನಲ್ಲಿ ಊಟದ ಪದಾರ್ಥಗಳ ನಮೂದಿಸಿದ್ದು, ಬಿಟ್ಟರೆ ವಿತರಿಸುವ ಆಹಾರಕ್ಕೆ ಹೆಸರಿಟ್ಟಿಲ್ಲ ಎಂದು ಬಿಬಿಎಂಪಿ ಸ್ಪಷ್ಟಿಕರಣ ನೀಡಿದೆ.

ಬೀದಿನಾಯಿಗಳಿಗೆ ಚಿಕನ್ ರೈಸ್ (Chicken Rice) ಭಾಗ್ಯದ ಕುರಿತು ಅನಿಮಲ್ ಹಸ್ಬೆಂಡ್ರಿ ಇನ್ಸ್ಟಾಗ್ರಾಂ ಖಾತೆಯಲ್ಲಿ ಬಿಬಿಎಂಪಿ ಪ್ರಕಟಣೆ ಹೊರಡಿಸಿದೆ. ಈ ಊಟಕ್ಕೆ ಹೆಸರಿಲ್ಲ. ಮಾನವ ಗುಣಮಟ್ಟದ ಆಹಾರವನ್ನು ಬೀದಿ ನಾಯಿಗಳಿಗೆ ನೀಡುವುದಿಲ್ಲ. ನಾಯಿ ದರ್ಜೆಯ ಆಹಾರ ನೀಡಲಾಗುವುದು. ಟೆಂಡರ್‌ನಲ್ಲಿ ಊಟದ ಪದಾರ್ಥಗಳನ್ನು ನಮೂದಿಸಿದ್ದು ಬಿಟ್ಟರೇ ವಿತರಿಸುವ ಆಹಾರಕ್ಕೆ ಹೆಸರಿಟ್ಟಿಲ್ಲ ಎಂದು ಬಿಬಿಎಂಪಿ ತಿಳಿಸಿದೆ.

ಬೀದಿ ನಾಯಿಗಳಿಗೆ ಪಾಲಿಕೆಯಿಂದ ಚಿಕನ್‌ ರೈಸ್‌ ಭಾಗ್ಯ’ ಕುರಿತು ಮೊದಲ ಬಾರಿಗೆ ಬಿಬಿಎಂಪಿಯ ಪಶುಪಾಲನೆ ವಿಭಾಗದ ಅಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದು, ಕೋಳಿ ಮಾಂಸದ ತ್ಯಾಜ್ಯವನ್ನು ಬಳಸಿ ಆಹಾರ ಸಿದ್ಧಪಡಿಸಿ ಬೀದಿ ನಾಯಿಗಳಿಗೆ ನೀಡಲಾಗುವುದು. ಅದಕ್ಕಾಗಿ ಕೋಳಿಯನ್ನು ಕೊಂದು ಹಾಕುವುದಿಲ್ಲ.ಟೆಂಡರ್‌ನಲ್ಲಿ ಬೀದಿ ನಾಯಿಗಳಿಗೆ ತಯಾರಿಸುವ ಆಹಾರದ ಪದಾರ್ಥವನ್ನು ಮಾತ್ರ ನಮೂದಿಸಲಾಗಿತ್ತು. ಚಿಕನ್‌ ರೈಸ್‌, ಚಿಕನ್‌ ಬಿರಿಯಾನಿ ಎಂದು ನಮೂದಿಸಿಲ್ಲ. ಸಸ್ಯಾಹಾರವನ್ನು ಬೀದಿ ನಾಯಿಗಳು ತಿನ್ನುವುದಿಲ್ಲ. ಹಾಗಾಗಿ, ಮಾಂಸಾಹಾರ ನೀಡಲಾಗುತ್ತಿದೆ.

ಗರದ ಕೆಲವು ಕಡೆ ಬೀದಿ ನಾಯಿಗಳ ಹಿಡಿದು ಸಂತಾನಹರಣ ಶಸ್ತ್ರ ಚಿಕಿತ್ಸೆ (ಎಬಿಸಿ) ಹಾಗೂ ಆ್ಯಂಟಿರೇಬಿಸ್ ಲಸಿಕೆ(ಎಆರ್‌ವಿ) ಹಾಕುವುದು ಕಷ್ಟವಾಗಿದೆ. ಆಹಾರ ವಿತರಣೆಯಿಂದ ಆ ನಾಯಿಗಳ ಹಿಡಿದು ಎಬಿಸಿ ಹಾಗೂ ಎಆರ್‌ವಿಗೆ ಸಹಕಾರಿಯಾಗಲಿದೆ. ಬೀದಿ ನಾಯಿಗಳ ಆಹಾರ ದೊರೆಯುವುದರಿಂದ ನಾಯಿಗಳ ಆಕ್ರಮಣಶೀಲತೆ ಕಡಿಮೆಯಾಗಲಿದೆ. ಸಾರ್ವಜನಿಕರಿಗೆ ಹತ್ತಿರವಾಗಲಿವೆ. ಬೀದಿ ನಾಯಿ ನಿಯಂತ್ರಣ ಕಾರ್ಯಕ್ರಮಕ್ಕೆ ಸಹಕಾರಿಯಾಗಲಿದೆ. ಅಗತ್ಯವಿರುವ ಕಡೆ ಮಾತ್ರ ಆಹಾರ ವಿತರಣೆ ಮಾಡಲಾಗುವುದು. ಪ್ರತಿ ಒಂದು ನಾಯಿಗೆ ದಿನದ ಆಹಾರಕ್ಕೆ 11 ರು. ವೆಚ್ಚ ಮಾಡಲಾಗುತ್ತಿದೆ. ಆಹಾರ ಸಾಗಾಣಿಕೆ ವೆಚ್ಚ, ಸ್ವಚ್ಛತೆ, ಜಿಎಸ್‌ಟಿ ಸೇರಿದಂತೆ ಒಟ್ಟು ವೆಚ್ಚ 22.42 ರು. ಆಗಲಿದೆ. ಭಾರತ ಪ್ರಾಣಿ ಕಲ್ಯಾಣ ಮಂಡಳಿಯ ಕೈಪಿಡಿ, ಸಂಶೋಧನೆಯ ಶಿಫಾರಸ್ಸು ಆಧಾರಿಸಿ ಆಹಾರ ವಿತರಣೆ ಯೋಜನೆ ರೂಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!