Thursday, August 11, 2022

Latest Posts

ಜನ್ಮದಿನದ ಸಂಭ್ರಮದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಗಣ್ಯರ ಹಾರೈಕೆ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಇಂದು ಜನ್ಮದಿನದ ಸಂಭ್ರಮ.1943ರಲ್ಲಿ ಜನಿಸಿದ ಬಿಎಸ್ ವೈ ಅವರು ತಮ್ಮ 78ನೇ ವಸಂತಗಳನ್ನು ಪೂರೈಸಿದ್ದು, 79ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ.

ಇಂದು ರಾಜ್ಯ, ರಾಷ್ಟ್ರ ನಾಯಕರು ಹಾಗೂ ಅನೇಕ ಅಭಿಮಾನಿಗಳು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರುತ್ತಿದ್ದಾರೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ರಾಜ್ಯದ ಡಿಸಿಎಂ ಅಶ್ವತ್ಥ ನಾರಾಯಣ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೇರಿದಂತೆ ಅನೇಕ ರಾಜಕೀಯ ಗಣ್ಯರು ಶುಭ ಹಾರೈಸಿದ್ದಾರೆ.

ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಜನ್ಮದಿನದ ಶುಭಾಶಯಗಳು ಬಿ.ಎಸ್.ಯಡಿಯೂರಪ್ಪ ಅವರೆ. ನಿಮ್ಮ ಆರೋಗ್ಯ ಹಾಗೂ ದೀರ್ಘಾಯುಷ್ಯದಿಂದ ಸಮಾಜ ಸೇವೆ ಮಾಡುವಂತಾಗಲಿ ಎಂದು ಹಾರೈಸಿದ್ದಾರೆ.

ನಮ್ಮ ನೆಚ್ಚಿನ ನಾಯಕ, ರೈತಬಂಧು, ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರ ಜನ್ಮದಿನದಂದು ನನ್ನ ಹಾರ್ದಿಕ ಶುಭಾಶಯಗಳು. ನಾಡಿನ ಸಮಗ್ರ ಅಭಿವೃದ್ಧಿ, ಸುದೀರ್ಘ ಸಾರ್ವಜನಿಕ ಸೇವೆಗಾಗಿ ಭಗವಂತನ ಶುಭಾಶೀರ್ವಾದ ಸದಾ ನಿಮ್ಮ ಮೇಲಿರಲಿ ಎಂದು ಡಿಸಿಎಂ ಅಶ್ವತ್ಥ ನಾರಾಯಣ ಶುಭ ಹಾರೈಸಿದ್ದಾರೆ.

ರೈತ ಬಂಧು, ದಿಟ್ಟ ದೀಮಂತ ನಾಯಕರು ರಾಜ್ಯದ ಮುಖ್ಯಮಂತ್ರಿಗಳು ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ಅವರಿಗೆ ಹೆಚ್ಚಿನ ಆಯಸ್ಸು ಹಾಗೂ ಉತ್ತಮ ಆರೋಗ್ಯ ನೀಡಲಿಯೆಂದು ಪ್ರಾರ್ಥಿಸುತ್ತೇನೆ‌ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಶುಭಾಶಯ ಕೋರುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss