ಹೊಸ ದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿರುವ ಶ್ರೀರಾಮ ವಿದ್ಯಾಕೇಂದ್ರ ಟ್ರಸ್ಟ್ ನ ಕ್ರೀಡಾ ಹಾಗೂ ಸಾಂಸ್ಕೃತಿಕೋತ್ಸವವನ್ನು ಉದ್ಘಾಟಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಸಂಜೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಈ ಸಂದರ್ಭ ಜಿಲ್ಲಾಡಳಿತದಿಂದ ಸಿಎಂ ಅವರನ್ನು ಸ್ವಾಗತಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್, ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳಿದ್ದರು.