ಹೊಸದಿಗಂತ ವರದಿ, ಬೆಳಗಾವಿ:
ಇದೇ ಮೊದಲ ಬಾರಿಗೆ ರಾಜ್ಯಮಟ್ಟದಲ್ಲಿ ಆಚರಣೆ ಮಾಡಲಾಗುತ್ತಿರುವ ಕಿತ್ತೂರು ಉತ್ಸವವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಉದ್ಘಾಟಿಸಿದರು.
ಇದಕ್ಕೂ ಮೊದಲು ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ರಾಣಿ ಚನ್ನಮ್ಮನ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರುರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ. ಕಾರಜೋಳ, ಸಚಿವ ಮುರುಗೇಶ ನಿರಾಣಿ, ಚನ್ನಮ್ಮನ ಕಿತ್ತೂರು ಶಾಸಕರಾದ ಮಹಾಂತೇಶ ದೊಡ್ಡಗೌಡರ, ಮಹಾಂತೇಶ ಕೌಜಲಗಿ, ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.