ದಕ್ಷಿಣ ಕನ್ನಡ ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಳೆದ ಹಲವು ದಿನಗಳಿಂದ ಮಳೆ ಸುರಿದು ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಅಪಾರ ಹಾನಿಯಾಗಿದ್ದು, ಇಂದು ನೆರೆ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇಂದು ಜಿಲ್ಲೆಯ ಬಂಟ್ವಾಳ ತಾಲೂಕಿನ ಇತ್ತೀಚೆಗೆ ಮಣ್ಣು ಕುಸಿತದಿಂದ ಸಾವನ್ನಪ್ಪಿದ ಕೇರಳ ಮೂಲದ ಮೂವರು ವ್ಯಕ್ತಿಗಳ ವಾರಸುದಾರರಿಗೆ ತಲಾ 5 ಲಕ್ಷ ರೂಪಾಯಿ ಮೊತ್ತದ ಪರಿಹಾರ ಚೆಕ್ಕನ್ನು ಸಿಎಂ ವಿತರಿಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್ ಅಶೋಕ್ , ಇಂಧನ ಸಚಿವ ಸುನಿಲ್ ಕುಮಾರ್, ಮೀನುಗಾರಿಕೆ ಸಚಿವ ಎಸ್ ಅಂಗಾರಾ ಮತ್ತು ಇತರರು ಉಪಸ್ಥಿತರಿದ್ದರು.

ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ದಲ್ಲಿ ಭೂಕಂಪನದಿಂದಾಗಿ ಹಾನಿಗೆ ಒಳಗಾದ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು

ಉಪ್ಪಿನಂಗಡಿ ಪರಿಸರದಲ್ಲಿ ಉಂಟಾಗಿರುವ ನೆರೆ ಹಾನಿ ಹಾಗೂ ನೇತ್ರಾವತಿ ಹಾಗೂ ಕುಮಾರಧಾರಾ ನದಿ ಸಂಗಮ ಸ್ಥಳವನ್ನು ಮಂಗಳವಾರ ಸಾಯಂಕಾಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವೀಕ್ಷಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!