ಕಾವೇರಿ ಮಾತೆಗೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹೊಸದಿಗಂತ ವರದಿ, ಮಂಡ್ಯ:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಂಪತಿ ಸಮೇತ ಬುಧವಾರ ಮಧ್ಯಾಹ್ನ ಕಾವೇರಿ ಮಾತೆಗೆ ಬಾಗಿನ ಅರ್ಪಿಸಿದರು.
ಮಧ್ಯಾಹ್ನ 12 ಗಂಟೆಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಂಪತಿ, ಜಲಾಶಯದ ಕೆಳ ಭಾಗದಲ್ಲಿರುವ ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿದರು. ಬಳಿಕ ಅಣೆಕಟ್ಟೆಯ ಮೇಲ್ಬಾಗಕ್ಕೆ ತೆರಳಿ ಕಾವೇರಿ ತಾಯಿಗೆ ಬಾಗಿನ ಅರ್ಪಿಸಿದರು.
ಇದೇ ಮೊದಲ ಬಾರಿಗೆ ರಾಜ್ಯದ ಮುಖ್ಯಮಂತ್ರಿಯೊಬ್ಬರು ಆಷಾಡ ಮಾಸದಲ್ಲಿ ಕಾವೇರಿಗೆ ಬಾಗಿನ ಅರ್ಪಿಸಿದ್ದಾರೆನ್ನಲಾಗಿದ್ದು, ಈ ಹಿಂದೆ ಆಷಾಡ ಮುಗಿದ ನಂತರವಷ್ಟೇ ಬಾಗಿನ ಅರ್ಪಿಸುತ್ತಿದ್ದರು.
ಜಲ ಸಂಪನ್ಮೂಲ ಇಲಾಖೆ ಸಚಿವ ಗೋವಿಂದ ಎಂ. ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ರೇಷ್ಮೆ, ಯುವ ಜನಸಬಲೀಕರಣ ಕ್ರೀಡಾ ಸಚಿವ ಡಾ.ಕೆ.ಸಿ ನಾರಾಯಣ ಗೌಡ, ಸಹಕಾರ ಸಚಿವ ಎಸ್.ಟಿ ಸೋಮಶೇಖರ್, ವಿಧಾನಪರಿಷತ್ ಸದಸ್ಯರಾದ, ಮಧು ಜಿ.ಮಾದೇಗೌಡ, ದಿನೇಶ್ ಗೂಳಿಗೌಡ, ಶಾಸಕರುಗಳಾದ ಎಂ.ಶ್ರೀನಿವಾಸ್, ಡಿ.ಸಿ ತಮ್ಮಣ್ಣ, ಸಿ.ಎಸ್ ಪುಟ್ಟರಾಜು, ಕೆ.ಅನ್ನದಾನಿ,ರವೀಂದ್ರ ಶ್ರೀಕಂಠಯ್ಯ, ಎಲ್.ನಾಗೇಂದ್ರ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಾ.ಪು ಸಿದ್ದಲಿಂಗಸ್ವಾಮಿ, ಕೃಷ್ಣರಾಜಸಾಗರ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ನರಸಿಂಹ, ಮೈಸೂರು ಮೇಯರ್ ಸುನಂದ ಪಾಲನೇತ್ರ, ಜಿಲ್ಲಾಧಿಕಾರಿ ಎಸ್. ಅಶ್ವತಿ, ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!