114 ʼನಮ್ಮ ಕ್ಲಿನಿಕ್ʼ ಕೇಂದ್ರಗಳಿಗೆ ಚಾಲನೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ 

ಹೊಸದಿಗಂತ ವರದಿ, ಹುಬ್ಬಳ್ಳಿ:
ಮಹಿಳೆಯರಿ ಉಚಿತ ಆರೋಗ್ಯ ಸೌಲಭ್ಯ ಒದಗಿಸುವ ಉದ್ದೇಶದಿಂದ ಮಹಿಳಾ ಆಯುಷ್ಪತಿ ಕೇಂದ್ರಗಳನ್ನು ರಾಜ್ಯಾದ್ಯಾಂತ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಜಿಲ್ಲೆಯ ಭೈರಿದೇವರಕೊಪ್ಪದಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ರಾಜ್ಯಾದ್ಯಂತ ಸ್ಥಾಪಿಸಲಾದ 114 ʼನಮ್ಮ ಕ್ಲಿನಿಕ್ʼ ಕೇಂದ್ರಗಳಿಗೆ ಏಕಕಾಲಕ್ಕೆ ಚಾಲನೆ ನೀಡಿ ಮಾತನಾಡಿದರು.
ರಾಜ್ಯದಲ್ಲಿ ಸರ್ಕಾರ ಆರೋಗ್ಯ ಹಾಗೂ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದೆ. ಆರೋಗ್ಯ ಸೌಲಭ್ಯಕ್ಕಾಗಿ ಪ್ರಸ್ತುತ ವರ್ಷ 10 ಸಾವಿರ ಕೋಟಿ ಅನುದಾನ ನೀಡಲಾಗಿದೆ. 8 ಸಾವಿರ ಶಾಲಾ ಕೊಠಡಿಗಳನ್ನು ಸ್ಥಾಪಿಸಲಾಗುತ್ತಿದೆ ಎಂದರು.
ಬಡವರು ಹಾಗೂ ಸಾಮಾನ್ಯ ಜನರ ಜನರ ಆರೋಗ್ಯ ಸಮಸ್ಯೆ ಮನಗೊಂಡು ರಾಜ್ಯದಲ್ಲಿ 438 ನಮ್ಮ ಕ್ಲಿನಿಕ್ ಕೇಂದ್ರ ಆರಂಭಿಸಲಾಗುತ್ತಿದೆ. ಈಗ 114 ಪ್ರಾರಂಭಿಸಿದ್ದು, ಜನವರಿ ಅಂತ್ಯದಲ್ಲಿ ಎಲ್ಲವೂ ಆರಂಭವಾಗುತ್ತವೆ. ಬಿಜೆಪಿ ಸರ್ಕಾರ ಹಿಂದಿನ ಸರ್ಕಾರದ ಹಾಗೇ ಘೋಷಣೆ ಮಾಡುವುದಲ್ಲ ಕಾರ್ಯರೂಪಕ್ಕೆ ತರುವುದಾಗಿದೆ ಎಂದು ಕಾಂಗ್ರೆಸ್ ಪಕ್ಷದ ಬಗ್ಗೆ ವ್ಯಂಗ್ಯವಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!