ಮುಖ್ಯಮಂತ್ರಿ ಬೊಮ್ಮಾಯಿ ಅವರ ಎಸ್ಕಾರ್ಟ್ ವಾಹನ ಅಪಘಾತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಕಚೇರಿ ಬಳಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಎಸ್ಕಾರ್ಟ್ ವಾಹನ ಅಪಘಾತಕ್ಕೀಡಾಗಿ ತಾಯಿ ಹಾಗೂ ಮಗು ಗಾಯಗೊಂಡಿರುವ ಘಟನೆ ನಡೆದಿದೆ.

ಸಿಎಂ ಬೊಮ್ಮಾಯಿ ಅವರಿಗೆ ಭದ್ರತೆಗೆ ನೀಡಲಾಗಿದ್ದ ಸಿಇಎನ್ ಸಿಪಿಐ ಇದ್ದ ಎಸ್ಕಾರ್ಟ್ ವಾಹನ ಪಲ್ಟಿಯಾಗಿದೆ.

ವಾಣಿವಿಲಾಸ ಸಾಗರದಿಂದ ಹಿರಿಯೂರು ಕಡೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ರಸ್ತೆಯಲ್ಲಿ ತೆರಳುತ್ತಿದ್ದ ತಾಯಿ ಹಾಗೂ ಮಗು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!