Wednesday, July 6, 2022

Latest Posts

ಮುಖ್ಯಮಂತ್ರಿ ಬದಲಾವಣೆ, ಪ್ರಸ್ತುತ ರಾಜಕೀಯದಲ್ಲಿನ ಗೊಂದಲಗಳು ಸ್ವಲ್ಪ ದಿನಗಳಲ್ಲೇ ಸರಿಯಾಗಲಿವೆ: ಸಚಿವ ಈಶ್ವರಪ್ಪ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………….

ಹೊಸ ದಿಗಂತ ವರದಿ, ಶಿವಮೊಗ್ಗ :

ಮುಖ್ಯಮಂತ್ರಿ ಬದಲಾವಣೆ ಹಾಗೂ ಪ್ರಸ್ತುತ ರಾಜಕೀಯದಲ್ಲಿನ ಗೊಂದಲಗಳ ಬಗ್ಗೆ ಪಕ್ಷದಲ್ಲಿನ ಯಾರೂ ಬಹಿರಂಗವಾಗಿ ಮಾತನಾಡದಿದ್ದರೆ ಸ್ವಲ್ಪ ದಿನಗಳಲ್ಲಿ ಎಲ್ಲವೂ ಸರಿಯಾಗಲಿವೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆ ಬಗ್ಗೆ ಹೈಕಮಾಂಡ್ ನಾಯಕರು ಚರ್ಚಿಸಿ ನಿರ್ಧಾರ ಕೈಗೊಂಡಿದ್ದರು. ಅರುಣ್ ಸಿಂಗ್ ಇಲ್ಲಿಗೆ ಬಂದು ಎಲ್ಲರ ಅಭಿಪ್ರಾಯ ಪಡೆದು ಹೋಗಿದ್ದಾರೆ. ಅದನ್ನು ರಾಷ್ಟ್ರೀಯ ನಾಯಕರ ಗಮನಕ್ಕೂ ತಂದಿದ್ದಾರೆ. ಆದರೂ ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡುತ್ತಾ ಗೊಂದಲ ಮಾಡುತ್ತಿದ್ದಾರೆ ಎಂದರು.
ಮಠಾಧೀಶರು ಮುಖ್ಯಮಂತ್ರಿ ಯಡಿಯೂರಪ್ಪರನ್ನು ಭೇಟಿ ಮಾಡಿದ್ದು, ಈ ಸಂದರ್ಭದಲ್ಲಿ ರಾಷ್ಟ್ರ ನಾಯಕರ ತೀರ್ಮಾನಕ್ಕೆ ತಾವು ಬದ್ಧ ಎಂದು ಯಡಿಯೂರಪ್ಪನವರೇ ಹೇಳಿದ್ದಾರೆ. ಹೀಗಾಗಿ ಯತ್ನಾಳ್ ಸೇರಿದಂತೆ ಎಲ್ಲರೂ ಬಾಯಿ ಮುಚ್ಚಿಕೊಂಡಿದ್ದರೆ ಎಲ್ಲವೂ ಸರಿಯಾಗಲಿವೆ ಎಂದರು.
ತಮ್ಮ ಶಾಸಕರನ್ನು ಹಿಡಿತಲ್ಲಿಟ್ಟುಕೊಳ್ಳುವ ಶಕ್ತಿ ಕಾಂಗ್ರೆಸ್ ಹಾಗೂ ಜೆಡಿಎಸ್‌ಗೆ ಇಲ್ಲ. ಗೆಲ್ಲೋವರೆಗೆ ಪಕ್ಷ ಹಾಗೂ ಜನ ಎನ್ನುತ್ತಾರೆ. ಗೆದ್ದ ಮೇಲೆ ಎಲ್ಲಿ ಅವಕಾಶ ಸಿಕ್ಕುತ್ತದೆ ಎಂದು ಹುಡುಕುತ್ತಾ ಹೋಗುತ್ತಾರೆ. ಇದನ್ನು ತಿಳಿಯದೆ ಆ ಪಕ್ಷದ ನಾಯಕರು ಅನಗತ್ಯವಾಗಿ ಬಿಜೆಪಿ ಟೀಕೆ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.
ಜಿ.ಪರಮೇಶ್ವರ್ ಹಾಗೂ ಸಿದ್ದರಾಮಯ್ಯ ಇವರಿಬ್ಬರಿಗೂ ಒಬ್ಬರ ಮೇಲೊಬ್ಬರಿಗೆ ನಂಬಿಕೆ ಇಲ್ಲ. ಹೀಗಾಗಿ ಪರಮೇಶ್ವರ್ ಕಾಂಗ್ರೆಸ್‌ನಲ್ಲಿ ಮುಂದುವರಿಯುವುದೇ ಅನುಮಾನವಾಗಿದೆ. ಮುಂದಿನ ಸಿಎಂ ಘೋಷಣೆ ಮಾಡಿಸಿಕೊಳ್ಳುವ ಸಲುವಾಗಿಯೇ ಡಿಕೆಶಿ ಹಾಗೂ ಸಿದ್ದರಾಮಯ್ಯ ದೆಹಲಿಗೆ ಹೋಗಿದ್ದರು. ಅಧಿಕಾರ ಕೊಡಿಸಿದರೆ ಉಳಿಸಿಕೊಳ್ಳುವ ಯೋಗ್ಯತೆ ಇಲ್ಲವೆಂದು ಕಾಂಗ್ರೆಸ್ ಹೈಕಮಾಂಡ್ ಇಬ್ಬರಿಗೂ ಛೀ ಮಾರಿ ಹಾಕಿ ಕಳಿಸಿದೆ. ಪಕ್ಷದಲ್ಲಿ ಶಿಸ್ತಿಲ್ಲ. ಹೈಕಮಾಂಡ್ ಉಗಿದರೂ ಬುದ್ದಿ ಬಂದಿಲ್ಲ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss