ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿಲ್ಲ: ಸಚಿವ ಸತೀಶ ಜಾರಕಿಹೊಳಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನಮ್ಮ ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.

ಹಾಸನದಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಚರ್ಚೆ ನಡೆಯುತ್ತಿಲ್ಲ. ಹೊರಗಡೆ ಅಂತಹ ಚರ್ಚೆ ನಡೆಯುತ್ತಿರಬಹುದು.2028ಕ್ಕೆ ಮುಖ್ಯಮಂತ್ರಿಯಾಗುವ ಇಚ್ಛೆ ನನಗೂ ಇದೆ. ಇದನ್ನು ನನ್ನ ಮಗಳು ಕೂಡ ಹೇಳಿರಬಹುದು ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ನಂತರ ಸತೀಶ ಜಾರಕಿಹೊಳಿ ಮುಖ್ಯಮಂತ್ರಿ ಆಗಲು ಸಮರ್ಥರು ಎನ್ನುವ ಚಿಕ್ಕಮಗಳೂರು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಸಿಎಂ ಸಿದ್ದರಾಮಯ್ಯ ಅಧಿಕಾರಾವಧಿ ನಂತರ ಸಿಎಂ ಆಗಲಿ ಎಂದು ಅವರು ಹೇಳಿರಬಹುದು. ಸಿದ್ದರಾಮಯ್ಯ ಬದಲಾವಣೆ ಪ್ರಶ್ನೆ ಇಲ್ಲವೆಂದು ಹೈಕಮಾಂಡ್ ಕೂಡ ಹೇಳಿದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಬದಲಾವಣೆ ಇಲ್ಲವೆಂದು ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!