ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕೇವಲ ಊಹಾಪೋಹ-ಸಚಿವ ಉಮೇಶ್ ಕತ್ತಿ

ಹೊಸದಿಗಂತ ವರದಿ ಮಂಡ್ಯ:

ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬದಲಾವಣೆ ಕೇವಲ ಊಹಾಪೋಹ ಅಷ್ಟೇ, ಮುಂದಿನ ವಿಧಾನಸಭಾ ಚುನಾವಣೆಯನ್ನು ಅವರ ನೇತೃತ್ವದಲ್ಲಿ ಎದುರಿಸುತ್ತೇವೆ ಎಂದು ಅರಣ್ಯ ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದರು.

ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರದ ವಿಶ್ವವಿಖ್ಯಾತ ಗಗನಚುಕ್ಕಿ ಜಲಪಾತ ಹಾಗೂ ಜಲವಿದ್ಯುತ್ ಸ್ಥಾವರ ವೀಕ್ಷಣೆ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಅವರ ಸರ್ಕಾರದಲ್ಲಿ ಸಚಿವನಾಗಿ ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿರುವೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದರು. ಈ ವೇಳೆ ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ನಮ್ಮ ಪಕ್ಷಕ್ಕೆ ಮತ್ತೆ ಬಹುಮತ ಬರಲಿದ್ದು, ಆಗ ಮುಖ್ಯಮಂತ್ರಿ ಸ್ಥಾನ ನೀಡಲು ವರಿಷ್ಠರ ಬಳಿ ಮನವಿ ಮಾಡುವೆ. ಏಕೆಂದರೆ 8 ಬಾರಿ ಶಾಸಕನಾಗಿ ಆಯ್ಕೆಯಾಗಿ ವಿವಿಧ ಇಲಾಖೆಗಳಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿರುವೆ. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಯಾಗಿ ನಾಡಿನ ಜನರ ಸೇವೆ ಮಾಡಲು ಹಂಬಲವಿದೆ ಎಂದರು.

ಮೇಕೆದಾಟು ಯೋಜನೆಗೆ ಸಹಕಾರ ನೀಡಲು ತಮಿಳುನಾಡಿಗೆ ಮನವಿ :

ಬೆಂಗಳೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮುಂದಿನ ದಿನಗಳಲ್ಲಿ ಜನರ ಅನುಕೂಲಕ್ಕಾಗಿ ಮೇಕೆದಾಟು ಯೋಜನೆಯ ಅವಶ್ಯಕತೆ ಇದೆ. ಹೀಗಾಗಿ ಯೋಜನೆಯನ್ನು ಜಾರಿ ಮಾಡಲು ತಮಿಳುನಾಡು ಸರ್ಕಾರ ಅವಕಾಶ ಮಾಡಿಕೊಡಬೇಕು. ಮೇಕೆದಾಟು ಯೋಜನೆ ಜಾರಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!