ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಸಂಬಲ್ ಯೋಜನೆಯಡಿ 16,844 ಫಲಾನುಭವಿಗಳ ಖಾತೆಗಳಿಗೆ 379 ಕೋಟಿ ರೂ. ಹಾಕಲಾಗಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಮಂಗಳವಾರ ನಡೆದ ವರ್ಚುವಲ್ ಕಾರ್ಯಕ್ರಮವೊಂದರಲ್ಲಿ ಮಾಹಿತಿ ನೀಡಿದ ಅವರು, ಹಣವನ್ನು ಅಸಂಘಟಿತ ವಲಯಗಳಲ್ಲಿ ಕೆಲಸ ಮಾಡುತ್ತಿರುವವರ ಖಾತೆಗಳಿಗೆ ವರ್ಗಾಯಿಸಲಾಗಿದೆ ಎಂದಿದ್ದಾರೆ. ಕೊರೋನಾ ಸಮಯದಲ್ಲಿ ಸರ್ಕಾರವು ಯಾವಾಗಲೂ ಕಾರ್ಮಿಕರೊಂದಿಗೆ ಇರುತ್ತದೆ ಮತ್ತು ತಾವು ಬದುಕಿರುವವರೆಗೂ ಬಡವರಿಗೆ ತೊಂದರೆ ಕೊಡುವುದಿಲ್ಲ ಎಂದು ಹೇಳಿದ್ದಾರೆ.
ಕಾರ್ಮಿಕ ಸಚಿವ ಬ್ರಜೇಂದ್ರ ಪ್ರತಾಪ್ ಸಿಂಗ್ ಕೂಡ ವರ್ಚುವಲ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಹಣಕಾಸಿನ ಹೊರತಾಗಿ ಸರ್ಕಾರ ಬಡವರಿಗೆ ಪಡಿತರವನ್ನು ವಿತರಿಸುತ್ತಿದೆ ಎಂದರು.
ಕೊರೋನಾ ವಿರುದ್ಧ ಆಡಳಿತದೊಂದಿಗೆ ಸಹಕರಿಸಬೇಕೆಂದು ಜನರಿಗೆ ಮನವಿ ಮಾಡಿದರು.