ರಾಜಸ್ಥಾನ ರಾಜ್ಯಪಾಲರನ್ನು ಭೇಟಿಯಾದ ನಿಯೋಜಿತ ಮುಖ್ಯಮಂತ್ರಿ ಭಜನ್ ಲಾಲ್: ಸರ್ಕಾರ ರಚಿಸಲು ಹಕ್ಕು ಮಂಡನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ರಾಜಸ್ಥಾನ ನಿಯೋಜಿತ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರು ಮಂಗಳವಾರ ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರನ್ನು ಭೇಟಿ ಮಾಡಿ,ಮುಂದಿನ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು.

ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಜನ್ ಲಾಲ್ ಶರ್ಮಾ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ಬಳಿಕ ರಾಜಭವನಕ್ಕೆ ತೆರಳಿದ ಭಜನ್ಲಾಲ್ ಶರ್ಮಾ ಅವರು ರಾಜ್ಯದಲ್ಲಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಸಿಪಿ ಜೋಶಿ ಅವರು ರಾಜ್ಯಪಾಲರಿಗೆ ಪತ್ರ ಸಲ್ಲಿಸಿದ್ದು, ಶರ್ಮಾ ಅವರನ್ನು ರಾಜ್ಯದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ರಾಜಭವನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶ

ರ್ಮಾ ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕ ಮತ್ತು ಪಕ್ಷದ ಕೇಂದ್ರ ವೀಕ್ಷಕ ರಾಜನಾಥ್ ಸಿಂಗ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಇದ್ದರು. ಈ ವೇಳೆ ನಿಯೋಜಿತ ಉಪಮುಖ್ಯಮಂತ್ರಿ ದಿಯಾ ಕುಮಾರಿ ಮತ್ತು ಪ್ರೇಮ್ ಚಂದ್ ಬೈರ್ವಾ ಕೂಡ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!