ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತಕ್ಕೆ ಸ್ವಾತಂತ್ರ್ಯ ದೊರೆತು 77ವರ್ಷಗಳು ಕಳೆದಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಧ್ವಜಾರೋಹಣ ನೆರವೇರಿಸಿದರು.
ಬಳಿಕ ತೆರೆದ ಜೀಪ್ನಲ್ಲಿ ಪರೇಡ್ ವೀಕ್ಷಣೆ ಮಾಡಿ, ತುಕಡಿಗಳಿಂದ ಗೌರವ ವಂದನೆಯನ್ನು ಸ್ವೀಕರಿಸಿದರು. ಗೌರವ ವಂದನೆ ಸ್ವೀಕರಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ರಾಜ್ಯದ ಜನರನ್ನುದ್ದೇಶಿಸಿ ಮಾತನಾಡಿದರು.
ಇದಕ್ಕೂ ಮೊದಲು ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಿದ್ದರು. ಸ್ವಾತಂತ್ರ್ಯೋತ್ಸವ ಹಿನ್ನೆಲೆ ಮೈದಾನದ ಸುತ್ತ ಬಿಗಿ ಭದ್ರತೆ ಏರ್ಪಡಿಸಿಲಾಗಿದೆ.