ದೀಪ ಬೆಳಗುವ ಮೂಲಕ ಅಕ್ಷರ ಜಾತ್ರೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಕ್ಕರೆ ನಾಡು ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದೀಪ ಬೆಳಗುವ ಮೂಲಕ ಸಿಎಂ ಸಿದ್ದರಾಮಯ್ಯ  ಚಾಲನೆ ನೀಡಿದರು.

ಕರ್ನಾಟಕದಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯೆಂದು ಹೆಸರು ಪಡೆದಿರುವ ಹಾಗೂ ಸಕ್ಕರೆ ನಗರಿ ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ಆಯೋಜಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಅಭಿಮಾನದಿಂದ ಹಾಗೂ ಸಂತೋಷದಿಂದ ಉದ್ಘಾಟಿಸಿದರು. ಹೊಂಬಾಳೆ ಅರಳಿಸಿ ಕನ್ನಡ ನುಡಿ ಅರಳಲಿ ಎಂಬ ಆಶಯದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.

ಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯಸಾನಿಧ್ಯ ವಹಿಸಿದ್ದರು. ಸಮ್ಮೇಳನಾಧ್ಯಕ್ಷರಾದ ನಾಡೋಜ ಡಾ. ಗೊ.ರು.ಚನ್ನಬಸಪ್ಪ, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡ, ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಾದ ಡಾ ಚಂದ್ರ ಶೇಖರ ಕಂಬಾರ, ವೇದಿಕೆಯ ಮೇಲೆ ಇದ್ದರು

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!