ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ( Chief Minister Siddaramaiah ) ಚಾಲನೆ ನೀಡಿದ್ದಾರೆ.
ಈ ಮೂಲಕ ಇಂದಿನಿಂದಲೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ( Gruha Lakshmi Scheme Registration ) ಆರಂಭಗೊಂಡಿದೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಜರಿದ್ದರು.
ನಾಳೆಯಿಂದ 1.28 ಲಕ್ಷ ಕುಟುಂಗಳಿಗೆ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭವಾಗಲಿದೆ. ಯಾವುದೇ ತೊಂದರೆಯಾಗದಂತೆ ಯೋಜನೆಗೆ ನೋಂದಣಿ ಪ್ರಕ್ರಿಯೆ ಮಾಡಲಾಗುತ್ತದೆ ಎಂದು ಹೆಬ್ಬಾಳ್ಕರ್ ತಿಳಿಸಿದರು.