ಹೊಸದಿಗಂತ ವರದಿ, ಭಾಗಮಂಡಲ(ಕೊಡಗು):
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಭಾಗಮಂಡಲ ಹಾಗೂ ತಲಕಾವೇರಿಗೆ ಭೇಟಿ ವಿಶೇಷ ಪೂಜೆ ಸಲ್ಲಿಸಿದರು.
ಪ್ರಾರಂಭದಲ್ಲಿ ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಮಹಾಗಣಪತಿ, ಭಗಂಡೇಶ್ವರ, ಮಹಾವಿಷ್ಣು, ಸುಬ್ರಹ್ಮಣ್ಯ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು.
ಬಳಿಕ ತ್ರಿವೇಣಿ ಸಂಗಮಕ್ಕೆ ತೆರಳಿ ವಿಶೇಷ ಕಾವೇರಿಗೆ ಪೂಜೆ ಸಲ್ಲಿಸಿದರು.
ಅನಂತರ ಕಾವೇರಿ ಉಗಮ ಸ್ಥಾನ ತಲಕಾವೇರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ಈ ಸಂದರ್ಭ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಅರುಣ್ ಮಾಚಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ತಕ್ಕ ಮುಖ್ಯಸ್ಥ ಕೋಡಿ ಮೋಟಯ್ಯ, ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮಹೇಶ್ ನಾಚಯ್ಯ, ಗ್ಯಾರಂಟಿ ಯೋಜನೆ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ಭಾಗಮಂಡಲ ಗ್ರಾ.ಪಂ. ಅಧ್ಯಕ್ಷ ಕಾಳನ ರವಿ, ಪ್ರಮುಖರಾದ ಎಚ್.ಎಸ್.ಚಂದ್ರಮೌಳಿ, ಗ್ಯಾರಂಟಿ ಯೋಜನೆ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷರು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಪ್ರಮುಖರು ಇದ್ದರು.