ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35 ಸಾವಿರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ ವಜ್ರ ಮಹೋತ್ಸವ ಉದ್ಘಾಟಿಸಿ, ವಜ್ರಜ್ಯೋತಿ ಸ್ಮರಣ ಸಂಚಿಕೆ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು. ಆಹಾರ ಉತ್ಪಾದನೆಯಲ್ಲಿ ನಾವು ಸ್ವಾವಲಂಬಿಗಳಾಗುತ್ತಿರುವುದಕ್ಕೆ ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಭಿಗಳಾಗಿರುವುದೆ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ.
ವಿದ್ಯುತ್ ಪ್ರಮುಖ ಕಚ್ಛಾವಸ್ತು ಎನ್ನುವುದನ್ನು ನಾವು ಮರೆಯಬಾರದು ಎಂದು ತಿಳಿಸಿದ್ದಾರೆ. ನೌಕರರು ಮತ್ತು ಕಾರ್ಮಿಕರು ಬಹಳ ಶ್ರಮ ವಹಿಸಿ ಕಾರ್ಯ ನಿರ್ವಹಿಸುತ್ತಿದ್ದು ನಿಮ್ಮ ಎಲ್ಲಾ ಬೇಡಿಕೆಗಳನ್ನೂ ಈಡೇರಿಸಲು ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದಾರೆ. ಇದೇ ವೇಳೆ ರಾಜ್ಯದಲ್ಲಿರುವ ಎಸ್ಕಾಂಗಳನ್ನು ಖಾಸಗೀಕರಣ ಮಾಡಲು ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭರವಸೆ ನೀಡಿದ್ದಾರೆ. ಇಂಧನ ಸಚಿವ ಕೆ.ಜೆ.ಜಾರ್ಜ್ ಮಾತನಾಡಿ, ರಾಜ್ಯ ಸರ್ಕಾರದ ಜನಪರ ಯೋಜನೆಗಳ ಅನುಷ್ಠಾನಕ್ಕೆ ಕೆಪಿಟಿಸಿಎಲ್ ನೌಕರರ ಸಂಘ ಬೆಂಬಲವಾಗಿದೆ, ನಮ್ಮ ಸರ್ಕಾರವೂ ಈ ಸಂಘದ ಪರವಾಗಿದೆ ಎಂದು ಹೇಳಿದ್ದಾರೆ.
ಇತ್ತೀಚಿನ ಐವರು ಅಥವಾ ಅದಕ್ಕೂ ಹೆಚ್ಚು ಮುಖ್ಯಮಂತ್ರಿಗಳು ಇಲಾಖೆಗಳ ಖಾಲಿ ಇದ್ದ ೧,೨,೩ ಮತ್ತು ೪ನೇ ದರ್ಜೆಯ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಂಡಿಲ್ಲ.ಏಕೆಂದರೆ ಇವರಲ್ಲಿ ಸಮಾನ ತಿಳಿವಳಿಕೆ ಇದೆ.ಏನೆಂದರೆ ಇಷ್ಟೆಲ್ಲಾ ಹುದ್ದೆಗಳ ಭರ್ತಿಗೆ ಇಚ್ಛಾಶಕ್ತಿ ತೋರಿದರೆ ಅಭಿವೃದ್ಧಿ ಕನಸಾಗುತ್ತದೆ.ಇದಕ್ಕಿಂತ ಹೆಚ್ಚಾಗಿ ವೇತನ ನೀಡಿಕೆ ನಿಭಾಯಿಸ ಹೊರಟರೆ ತಾವೇ ತ್ಯಾಗಜೀವಿಗಳಾಗಲು ಸಿದ್ಧರಿಲ್ಲ.
ಇದು ಪ್ರಜಾಪ್ರಭುತ್ವದ ದುರಂತ.ಅಭಿವೃದ್ಧಿ ನೆನೆಗುದಿಗೆ ಬಿದ್ದರೆ ತಮ್ಮ ನಿರಂತರ ಆದಾಯ ನಿಂತು ಹೋಗುತ್ತದೆ ಎಂಬ ಸಣ್ಣ ಸತ್ಯ ಅರಿವಿಲ್ಲವೇ….. 👌👊🚩