ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೊಸದಿಗಂತ ವರದಿ, ದಾವಣಗೆರೆ:
ಜ. 14 ರಂದು ಮಣಿಪುರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸಲಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪಾಲ್ಗೊಳ್ಳಲಿದ್ದಾರೆ.
ಈ ಕುರಿತಂತೆ ಸಿಎಂ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಸಿಎಂ ಸಿದ್ಧರಾಮಯ್ಯ ಅವರು ನಾಳೆ ಬೆಳಿಗ್ಗೆ 9.30ಕ್ಕೆ ಹೆಚ್‌ಎಎಲ್ ಏರ್ ಪೋರ್ಟ್ ನಿಂದ ವಿಶೇಷ ವಿಮಾನದಲ್ಲಿ ಮಣಿಪುರಕ್ಕೆ ತೆರಳಲಿದ್ದಾರೆ.
ಮಣಿಪುರದ ತಿಕೇಂದ್ರಜಿತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಳಿಗ್ಗೆ 11.50ಕ್ಕೆ ತಲುಪಲಿದ್ದಾರೆ ಎಂದು ತಿಳಿಸಿದೆ. ಇಂಫಾಲ ಏರ್ ಪೋರ್ಟ್ ನಿಂದ 11.55ಕ್ಕೆ ರಸ್ತೆ ಮೂಲಕ ತೆರಳಲಿರೋ ಮುಖ್ಯಮಂತ್ರಿ ಸಿದ್ಧರಾಮಯ್ಯ 12.15ಕ್ಕೆ ಇಂಫಾಲ್ ಸಿಟಿಯನ್ನು ತಲುಪಲಿದ್ದಾರೆ. ಅಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಪಾಲ್ಗೊಳ್ಳೋದಾಗಿ ತಿಳಿಸಿದೆ.