ಹೊಸದಿಗಂತ ವರದಿ ಕಲಬುರಗಿ:
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹೆಸರು ಘೋಷಣೆಯಾಗುತ್ತಿದ್ದಂತೆ, ಅಭಿಮಾನಿಗಳ ಬಳಗದಿಂದ ಸಿದ್ದರಾಮಯ್ಯ ಅವರ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಲಾಗಿದೆ.
ನಗರದ ಸದಾ೯ರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಸಿದ್ದರಾಮಯ್ಯ ಅವರ ಭಾವಚಿತ್ರ ಇಟ್ಟು ಅಭಿಮಾನಿಗಳು, ಕಾಂಗ್ರೆಸ್ ಕಾಯ೯ಕತ೯ರು ಕ್ಷೀರಾಭಿಷೇಕ ಮಾಡಿ, ಪರಸ್ಪರ ಸಿಹಿ ತಿನ್ನಿಸುವ ಮೂಲಕ ಶುಭಾಶಯಗಳು ಕೋರಿದರು.
ಇನ್ನೂ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರ ಹೆಸರು ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾಯ೯ಕತ೯ರಲ್ಲಿ ಮತ್ತು ಅಭಿಮಾನಿಗಳಲ್ಲಿ ಸಂಭ್ರಮಾಚರಣೆ ಮನೆ ಮಾಡಿದೆ.