ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿದ್ದರಾಮಯ್ಯ ಮೊದಲ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಗಣಿ ಗುತ್ತಿಗೆ ನವೀಕರಣಕ್ಕೆ 500 ಕೋಟಿ ರೂ. ಕಿಕ್‌ಬ್ಯಾಕ್ ಪಡೆದಿರುವ ಆರೋಪ ಇದೆ. ಅದಕ್ಕೆ ಮೊದಲು ಉತ್ತರ ಕೊಡಿ ಎಂದು ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ರಾಮಮೂರ್ತಿಗೌಡ ಎಂಬುವವರು ಸಿದ್ದರಾಮಯ್ಯ ವಿರುದ್ಧ ಅಕ್ರಮ ಗಣಿಗಾರಿಕೆ ವಿರುದ್ಧ ಆರೋಪ ಮಾಡಿದ್ದಾರೆ. ಈ ಬಗ್ಗೆ ತನಿಖೆಗೆ ಪ್ರಾಸಿಕ್ಯೂಷನ್ ನೀಡುವಂತೆ ರಾಜ್ಯಪಾಲರಿಗೆ ಮನವಿ ಕೂಡ ಮಾಡಿದ್ದಾರೆ. ಗಣಿ ಗುತ್ತಿಗೆ ನವೀಕರಣದಿಂದ ಸರ್ಕಾರದ ಬೊಕ್ಕಸಕ್ಕೆ 5 ಸಾವಿರ ಕೋಟಿ ರೂ. ನಷ್ಟ ಆಗಿದೆ ಎಂದು ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.
ಮೈತ್ರಿ ಸರ್ಕಾರದ ಅವಧಿಯಲ್ಲಿ ಸಾಲ ಮನ್ನಾ ಮಾಡಿದಾಗ ಜನರ ಮೇಲೆ ತೆರಿಗೆ ಹಾಕಲಿಲ್ಲ. ಆದರೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಾಗಿ ಬೆಲೆ ಏರಿಕೆ ಮಾಡಿದೆ. ಕಾಂಗ್ರೆಸ್ ಸರ್ಕಾರ ಎರಡು ಲಕ್ಷ ಕೋಟಿ ರು. ಸಾಲ ಮಾಡಿದ್ದು, ಇದೇ ಸರ್ಕಾರ ಮುಂದುವರೆದರೆ 10 ಲಕ್ಷ ಕೋಟಿ ರೂ. ಸಾಲ ಮಾಡಲಿದೆ ಎಂದರು.