ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಬಳ್ಳಾಪುರದ ಚಿತ್ರಾವತಿ ಸಮೀಪ ಇಂದು ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13 ಕ್ಕೆ ಏರಿಕೆಯಾಗಿದೆ.
ಸಿಎಂ ಸಿದ್ದರಾಮಯ್ಯ ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಅಪಘಾತದಲ್ಲಿ 13ಮಂದಿ ಮೃತಪಟ್ಟ ಸುದ್ದಿ ಓದಿ ತುಂಬಾ ದುಃಖವಾಗಿದೆ, ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ.
ರಸ್ತೆ ಬದಿ ನಿಂತಿದ್ದ ಸಿಮೆಂಟ್ ಲಾರಿಗೆ ಟಾಟಾ ಸುಮೋ ಹಿಂದಿನಿಂದ ಡಿಕ್ಕಿ ಹೊಡೆದಿದ್ದು, 12 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ವ್ಯಕ್ತಿ ಮೃತಪಟ್ಟಿದ್ದಾರೆ.