ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ನಾಮಪತ್ರ ಸಲ್ಲಿಕೆ

ಹೊಸದಿಗಂತ ವರದಿ, ಚಿಕ್ಕಬಳ್ಳಾಪುರ:

ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ.ಸುಧಾಕರ್ ಗುರುವಾರ ಸಾಂಕೇತಿಕವಾಗಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ಕುಟಂಬ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಆಗಮಿಸಿದ ಸಚಿವ ಸುಧಾಕರ್, ಚಿಕ್ಕಪ್ಯಾಯಲಗುರ್ಕಿ ಗ್ರಾಮದ ಮನೆ ದೇವರು ಚನ್ನಕೇಶವಸ್ವಾಮಿ ದೇವಾಯಕ್ಕೂ ಭೇಟಿ ನೀಡಿದರು. ನಂತರ ಚಿಕ್ಕಬಳ್ಳಾಪುರ ನಗರದ ಉಪವಿಭಾಗಾಧಿಕಾರಿಗಳ ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿ ಸಂತೋಷ್ ಕುಮಾರ್‌ಗೆ ನಾಮಪತ್ರ ಸಲ್ಲಿಸಿದರು.

ಸಚಿವ ಸುಧಾಕರ್‌ಗೆ ಪತ್ನಿ ಪ್ರೀತಿ, ತಂದೆ ಕೇಶವರೆಡ್ಡಿ, ಸಹೋದರಿ ಅಶ್ವಿನಿ, ಹಾಗೂ ಮಾವ ಆನಂದ್ ಸಾಥ್ ನೀಡಿದ್ದಾರೆ.

ನಾಮಪತ್ರ ಸಲ್ಲಿಕೆ ನಂತರ ಮಾತನಾಡಿದ ಸುಧಾಕರ್, ಗುರುವಾರ ಗುರುವನ್ನು ನಂಬುವ ನಾನು ತಿರುಪತಿ ತಿಮ್ಮಪ್ಪನ ಪರಮ ಭಕ್ತ. ಹಾಗಾಗಿ ಇಂದು ದೇವರ ದರ್ಶನ ಪಡೆದು ಆಗಮಿಸಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದೇನೆ. ಪಕ್ಷ ಬಿ ಫಾರಂ ನೀಡಿದ್ದು, ಅದನ್ನು ಪಡೆಯಲು ಸಾಧ್ಯವಾಗಲಿಲ್ಲ. ಹಾಗೆ ಬಂದು ಇಂದು ಸಾಂಕೇತಿಕವಾಗಿ ನಾಮಿನೇಷನ್ ಮಾಡಿದ್ದೇನೆ ಎಂದರು.

ಏಪ್ರಿಲ್ 17ರಂದು ಮತ್ತೆ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆ ನಡೆಸಿ ನಾಮಪತ್ರ ಸಲ್ಲಿಸಲಿದ್ದೇನೆ. ಈ ಬಾರಿ ನನಗೆ ಪ್ರಬಲ ಪ್ರತಿಸ್ಪರ್ಧಿಗಳೇ ಇಲ್ಲ. ಕಳೆದ ಮೂರು ಬಾರಿ ಪಡೆದ ಲೀಡ್‌ಗಿಂತ ಹೆಚ್ಚಿನ ಲೀಡ್ ಪಡೆಯುವ ವಿಶ್ವಾಸವಿದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!