Monday, August 15, 2022

Latest Posts

ಮೇ 20-24ರವರೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‍ಡೌನ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………….

ಹೊಸ ದಿಗಂತ ವರದಿ , ಚಿಕ್ಕಬಳ್ಳಾಪುರ:

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊವಿಡ್ ಹೆಚ್ಚಾಗುತ್ತಿರುವುದರಿಂದ ಮೇ 20ರಿಂದ 24ರವರೆಗೆ ನಾಲ್ಕು ದಿನ ಸಂಪೂರ್ಣ ಲಾಕ್‍ಡೌನ್ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಕೊರೊನಾ ಎರಡನೇ ಅಲೆ ಜಿಲ್ಲೆಯಲ್ಲಿ ತೀವ್ರವಾಗಿ ಹರಡುತ್ತಿದ್ದು, ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಕಾರ್ಯಪ್ರವೃತ್ತವಾಗಿರುವ ಜಿಲ್ಲಾಡಳಿತ, ಮೇ 20ರಿಂದ 24ರವರೆಗೆ ನಾಲ್ಕು ದಿನ ಸಂಪೂರ್ಣ ಲಾಕ್‍ಡೌನ್ ಘೋಷಣೆ ಮಾಡಿದೆ ಎಂದು ಮಾಹಿತಿ ನೀಡಿದರು.
ಕೊರೊನಾ ಸೋಂಕಿರುವ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್‍ಡೌನ್ ಮಾಡಲು ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರ ಆದೇಶದೆ. ಈ ಹಿನ್ನೆಲೆಯಲ್ಲಿ ಉಸ್ತುವಾರಿ ಸಚಿವರಾದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರೊಂದಿಗೆ ಚರ್ಚಿಸಿ, ನಾಲ್ಕು ದಿನ ಸಂಪೂರ್ಣ ಲಾಕ್‍ಡೌನ್ ಘೋಷಿಸಿರುವುದಾಗಿ ಹೇಳಿದ ಅವರು, ಜಿಲ್ಲೆಯ ಜನತೆ ಸಹಕಾರ ನೀಡಬೇಕೆಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾತನಾಡಿ, ಲಾಕ್‍ಡೌನ್ ಸಮಯದಲ್ಲಿ ಅನಗತ್ಯವಾಗಿ ಸಂಚರಿಸಿದರೆ ನಿರ್ಧಾಕ್ಷ್ಯಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸೆಮಿಲಾಕ್‍ಡೌನ್ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಈಗಾಗಲೇ 27 ಚೆಕ್‍ಪೋಸ್ಟ್ ತೆರೆಯಲಾಗಿದೆ. 4 ದಿನಗಳ ಸಂಪೂರ್ಣ ಲಾಕ್‍ಡೌನ್‍ಗಾಗಿ ಮತ್ತಷ್ಟು ಚೆಕ್‍ಪೋಸ್ಟ್ ತೆರೆಯಲಾಗುವುದು. ಅಂತರ ಜಿಲ್ಲೆ, ರಾಜ್ಯಗಳ ವಾಹನಗಳ ಸಂಚಾರಕ್ಕೂ ಸಂಪೂರ್ಣ ನಿಬರ್ಂಧ ವಿಧಿಸಲಾಗುವುದು ಎಂದರು.
ರೋಗಿಗಳನ್ನು ಕರೆದೊಯ್ಯುವ, ವಿಮಾನ ಟಿಕೆಟ್ ತೋರಿಸುವ ವಾಹನಗಳಿಗೆ ಮಾತ್ರ ಗಡಿಯಲ್ಲಿ ಪ್ರವೇಶ ನೀಡಲಾಗುವುದು. ಗೂಡ್ಸ್ ವಾಹನಗಳನ್ನು ಬಿಟ್ಟು ಎಲ್ಲಾ ವಾಹನಗಳನ್ನು ತಡೆಯಲಾಗುವುದು ಎಂದು ತಿಳಿಸಿದರಲ್ಲದೇ, ಅನಗತ್ಯವಾಗಿ ಸಂಚರಿಸುವ ವಾಹನಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಆರೋಗ್ಯಾ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಇಂದಿರಾ ಆರ್ ಕಬಾಡೆ, ಆಹಾರ ಇಲಾಖೆ ಉಪನಿರ್ದೇಶಕಿ ಸವಿತಾ ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss