ಹೊಸ ದಿಗಂತ ವರದಿ, ಚಿಕ್ಕಬಳ್ಳಾಪುರ:
ಚಿಕ್ಕಬಳ್ಳಾಪುರ: ಹಿರೇನಾಗವಲ್ಲಿ ಬಳಿ ಜಿಲೆಟಿನ್ ಸ್ಪೋಟ ಪ್ರಕರಣಕ್ಕೆ ಸಂಬಂದಿಸಿದಂತೆ ಗುಡಿಬಂಡೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ (ಪಿಐ) ಮಂಜುನಾಥ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ಗೋಪಲ ರೆಡ್ಡಿ ಅವರನ್ನು ಅಮಾನತು ಮಾಡಿರುವುದಾಗಿ ಎಸ್.ಪಿ.ಮಿಥುನ್ ಕುಮಾರ್ ತಿಳಿಸಿದ್ದಾರೆ.
ಫೆ.7 ರಂದು ಕ್ರಷರ್ ಹಾಗೂ ಕ್ವಾರಿ ಮಾಲೀಕರ ವಿರುದ್ದ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ ಆರೋಪಿಗಳನ್ನು ಬಂಧಿಸುವಲ್ಲಿ ಕರ್ತವ್ಯ ಲೋಪವಾಗಿರುವ ಹಿನ್ನೆಲೆಯಲ್ಲಿ ಅಮಾನತ್ತು ಮಾಡಲಾಗಿದೆ ಎಂದು ತಿಳಿದುಬಂದಿದೆ.