Friday, June 2, 2023

Latest Posts

ಪೊಲೀಸ್‌ ಠಾಣೆ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಪೊಲೀಸ್‌ ಠಾಣೆಯ ಮೇಲೇರಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ನಡೆದಿದೆ.

ಹಳೆ ಮೂಡಿಗೆರೆ ಗ್ರಾಮದ ಶಿಲ್ಪ ಎಂಬುವವರು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಪೊಲೀಸ್ ಠಾಣೆಯ ಚಾವಣಿ ಮೇಲಿಂದ ಜಿಗಿಯಲು ಯತ್ನಿಸಿದ ಮಹಿಳೆಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.

2022ರಲ್ಲಿ ಹಳೆ ಮೂಡಿಗೆರೆ ಗ್ರಾಮದ ಶಿಲ್ಪ ಮತ್ತು ಆಕೆಯ ಅಕ್ಕನ ನಡುವೆ ಗಲಾಟೆಯಾಗಿತ್ತು. ಈ ವಿಷಯಕ್ಕೆ ಇಬ್ಬರು ಅಕ್ಕ ತಂಗಿಯರು ದೂರು ನೀಡಲು ಮೂಡಿಗೆರೆ ಠಾಣೆಗೆ ಹೋಗಿದ್ದರು. ಈ ವೇಳೆ ಅಲ್ಲಿನ ಸುಜಾತಾ ಎಂಬ ಮಹಿಳಾ ಪೊಲೀಸ್ ‌ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದರು. ಈ ಕಾರಣಕ್ಕೆ ಶಿಲ್ಪ ವಿರುದ್ದ ಮೂಡಿಗೆರೆ ‌ಠಾಣೆಯಲ್ಲಿ‌ ದೂರು ದಾಖಲಾಗಿತ್ತು. ಆದರೆ ಕಳೆದ ಒಂದು ವರ್ಷದಿಂದ ಶಿಲ್ಪ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನಲೆಯಲ್ಲಿ ಕೋರ್ಟ್​ ಆಕೆಯ ವಿರುದ್ಧ ಸಮನ್ಸ್ ಜಾರಿ‌ ಮಾಡಿತ್ತು. ಇದೀಗ ಮಹಿಳೆ ಕೋರ್ಟ್ ಸಮನ್ಸ್ ಹಿಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!