ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಮಕೂರಿನ ಚಿಕ್ಕನಾಯಕನಹಳ್ಳಿ ಮತಕ್ಷೇತ್ರದಲ್ಲಿ ಇಂದು ವಿಜಯ ಸಂಕಲ್ಪ ಯಾತ್ರೆಯ ಭಾಗವಾಗಿ ರೋಡ್ ಶೋ ನಡೆಯಿತು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ , ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ನಿಕಟ ಪೂರ್ವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ರೋಡ್ ಶೋ ನಡೆಸಿ ನಂತರ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಂಡರು.