ಹೊಸದಿಗಂತ ವರದಿ ಚಿಕ್ಕಮಗಳೂರು:
ಹುಲಿ ಉಗುರಿನ ಉರುಳಿಗೆ ಸಿಕ್ಕಿಕೊಂಡಿರುವ ಕಳಸದ ಉಪ ವಲಯ ಅರಣ್ಯಾಧಿಕಾರಿ ದರ್ಶನ್ ಅವರನ್ನು ಅಮಾನತುಗೊಳಿಸಲಾಗಿದೆ.
ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅರೆನೂರಿನ ಸುಪ್ರೀತ್ ಮತ್ತು ಅಬ್ದುಲ್ ಎಂಬುವವರು ಆಲ್ದೂರು ವಲಯಾರಣ್ಯಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು.
ಈ ಕಾರಣಕ್ಕೆ ಡಿ ಆರ್ ಎಫ್ ಓ ದರ್ಶನ್ ಅವರಿಗೆ ನೊಟೀಸು ಜಾರಿ ಮಾಡಿ ತನಿಖೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ ದರ್ಶನ್ ತನಿಖೆಗೆ ಹಾಜರಾಗದ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಿ ಆಲ್ದೂರು ವಲಯಾರಣ್ಯಾಧಿಕಾರಿಗಳು ಆದೇಶಿಸಿದ್ದು, ತನಿಖೆ ಮುಂದುವರಿಸಿದ್ದಾರೆ.