spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, September 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಚಿಕ್ಕಮಗಳೂರು| 18 ವರ್ಷದೊಳಗಿನವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

- Advertisement -Nitte

ಹೊಸ ದಿಗಂತ ವರದಿ, ಚಿಕ್ಕಮಗಳೂರು:

ಕೋವಿಡ್ ಮೂರನೇ ಅಲೆಯ ಜೊತೆಗೆ ಇತರರೆ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸುವ 0-18 ವರ್ಷದ ಮಕ್ಕಳಿಗೆ ಜಿಲ್ಲೆಯ ಎಲ್ಲಾ ತಾಲ್ಲೂಕು ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಂಡಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಉಮೇಶ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ 0-18 ವರ್ಷದೊಳಗಿನ ಮಕ್ಕಳಿಗೆ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಿ ಆದೇಶದಂತೆ ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆ, ಅಂಗನವಾಡಿಗಳಲ್ಲಿ 0-18 ವರ್ಷದ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಂಡಿದ್ದು ಪೋಷಕರು ತಮ್ಮ ಮಕ್ಕಳನ್ನು ವೈದ್ಯರಿಂದ ತಪಾಸಣೆಗೆ ಒಳಪಡಿಸಿ ಇತರೆ ಮಾರಕ ರೋಗದ ಲಕ್ಷಣಗಳು ಇದ್ದಲ್ಲಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವಂತೆ ಸಲಹೆ ನೀಡಿದರು.
ಜಿಲ್ಲೆಯ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಲ್ಲಿ ಪ್ರತಿ ಬುಧವಾರ ಉಚಿತವಾಗಿ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಕೋವಿಡ್ ಜತಗೆ ಇತರೆ ಮಾರಕ ರೋಗದ ತಪಾಸಣೆ ನಡೆಸಿ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಕೋವಿಡ್ ಹತೋಟಿಯಲ್ಲಿದೆ. ಆದರೂ ಮೂರನೇ ಅಲೆಯ ಮುನ್ಸೂಚನೆ ಹಿನ್ನಲೆ ಪೋಷಕರು ತಮ್ಮ ಮಕ್ಕಳ ಬಗ್ಗೆ ಹೆಚ್ಚು ನಿಗಾವಹಿಸಬೇಕು. ಕೋವಿಡ್ ನಿಯಮಗಳನ್ನು ಪಾಲಿಸಬೇಕು ಯಾವುದೇ ರೋಗದ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣವೇ ವೈದ್ಯರಿಂದ ಸೂಕ್ತ ತಪಾಸಣೆ ಮಾಡಿಸಿಕೊಳ್ಳುವಂತೆ ತಿಳಿಸಿದರು .
ಸೆ.17 ರಂದು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಹಿನ್ನಲೆ ಬೃಹತ್ ಲಸಿಕಾ ಅಭಿಯಾನ ನಡೆಯಲಿದ್ದು ಜಿಲ್ಲೆಯಲ್ಲಿ 60 ಸಾವಿರ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಲಸಿಕೆ ನೀಡುವಲ್ಲಿ ಇತರೆ ಜಿಲ್ಲೆಗೆ ಹೋಲಿಸಿದ್ದಲ್ಲಿ ಚಿಕ್ಕಮಗಳೂರು ಅಗ್ರಸ್ಥಾನದಲ್ಲಿದೆ ಎಂದು ಹೇಳಿದರು.
ಆರ್‍ಸಿಹೆಚ್ ಡಾ.ಭರತ್ ಮಾತನಾಡಿ ಕೋವಿಡ್ ಕಾರಣದಿಂದಾಗಿ ಸರ್ಕಾರವು ಮಕ್ಕಳ ಆರೋಗ್ಯದ ಮೇಲೆ ಹೆಚ್ಚು ನಿಗಾವಹಿಸಿದ್ದು 0-18 ವರ್ಷದ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ನಿದೇರ್ಶನ ನೀಡಿದೆ, ಅದರಂತೆ ಪ್ರತಿ ತಾಲ್ಲೂಕಿನಲ್ಲಿ ಬುಧವಾರದಂದು ಮಕ್ಕಳ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ ಎಂದು ತಿಳಿಸಿದರು.
ಕೋವಿಡ್ ಹೊರತಾಗಿ ಯಾವುದೇ ಮಾರಕ ರೋಗಗಳು ಕಂಡು ಬಂದಲ್ಲಿ ವೈದ್ಯರಿಂದ ತಪಾಸಣೆ ನಡೆಸಿ ಉನ್ನತ ಮಟ್ಟದ ಚಿಕಿತ್ಸೆಯನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದ್ದು ಪೋಷಕರು ಮಕ್ಕಳ ಆರೋಗ್ಯ ತಪಾಸಣೆ ಮಾಡಿಸುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳುವಂತೆ ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸರ್ಜನ್ ಡಾ.ಮೋಹನ್, ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಸೀಮಾ, ಮಕ್ಕಳ ತಜ್ಞರಾದ ಮಲ್ಲಿಕಾರ್ಜುನ್, ರವೀಂದ್ರ, ಜಾವಿದ್, ನಗರ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss