ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯಲ್ಲಿ ಮಕ್ಕಳ ದುರ್ಬಳಕೆ: ರಾಹುಲ್ ಗಾಂಧಿ ವಿರುದ್ಧ ಕ್ರಮಕ್ಕೆ ಮಕ್ಕಳ ಆಯೋಗ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನ್ಯಾಕುಮಾರಿಯಿಂದ ಆರಂಭಗೊಂಡಿರುವ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಕೇರಳ ಪ್ರವೇಶಿಸಿದೆ. ಇದರ ಜೊತೆಗೆ ಒಂದರ ಮೇಲೆ ಒಂದು ವಿವಾದವೂ ಸುತ್ತುವರಿಯುತ್ತಿದೆ.

ಭಾರತ್ ಜೋಡೋ ಯಾತ್ರೆಯಲ್ಲಿ ಹಿಂದೂ ಸಮುದಾಯದ ವಿರುದ್ಧ ಕಿಡಿ ಕಾರುವ ಪಾದ್ರಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದ ರಾಹುಲ್ ಗಾಂಧಿ ವಿವಾದ ಸೃಷ್ಟಿಮಾಡಿದ್ದರು. ಇದೀಗ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಮಕ್ಕಳನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಮಕ್ಕಳ ಹಕ್ಕುಗಳ ಆಯೋಗ ಕಿಡಿ ಕಾರಿದೆ.

ರಾಜಕೀಯ ರ್ಯಾಲಿ, ಸಮಾವೇಶದಲ್ಲಿ ಮಕ್ಕಳನ್ನು ದುರ್ಬಳಕೆ ಮಾಡಿಕೊಳ್ಳುವುದು ಕಾನೂನು ಬಾಹಿರವಾಗಿದೆ. ರಾಹುಲ್ ಗಾಂಧಿ ವಿರುದ್ಧ ಗರಂ ಆಗಿರುವ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಕ್ರಮಕ್ಕೆ ಆಗ್ರಹಿಸಿದೆ. ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಮಕ್ಕಳ ಹಕ್ಕುಗಳ ಆಯೋಗ, ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.

ಭಾರತ್ ಜೋಡೋ ಯಾತ್ರೆವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗದಲ್ಲಿ ಕೆಲ ದೂರುಗಳು ದಾಖಲಾಗಿದೆ. ರಾಹುಲ್ ಗಾಂಧಿ ತಮ್ಮ ರಾಜಕೀಯ ರ್ಯಾಲಿಯಲ್ಲಿಮಕ್ಕಳನ್ನು ಬಳಸಿಕೊಳ್ಳುತ್ತಿದ್ದಾರೆ. ರಾಹುಲ್ ಗಾಂಧಿಯ ಭಾರತ್ ಜೋಡೋ ಯಾತ್ರೆ ರಾಜಕೀಯ ಉದ್ದೇಶದ ರ್ಯಾಲಿಯಾಗಿದೆ. ಇದರಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದು ತಪ್ಪು. ಹೀಗಾಗಿ ಕ್ರಮ ಕೈಗೊಳ್ಳಬೇಕು ಎಂದು ಮಕ್ಕಳ ಹಕ್ಕುಗಳ ಆಯೋಗದಲ್ಲಿ ದೂರು ದಾಖಲಾಗಿದೆ.

ಈ ದೂರುಗಳನ್ನು ಪರಿಶೀಲಿಸಿದ ಮಕ್ಕಳ ಹಕ್ಕುಗಳ ಆಯೋಗ, ನೇರವಾಗಿ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ. ರಾಹುಲ್ ಗಾಂಧಿ ಯಾತ್ರೆಯಲ್ಲಿ ರಾಜಕೀಯ ಉದ್ದೇಶಕ್ಕೆ ಮಕ್ಕಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಈ ದೂರಿನ ಕುರಿತು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿದೆ.

ರಾಹುಲ್ ಗಾಂಧಿ ಯಾತ್ರೆ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವಿಡಿಯೋ ಹಾಗೂ ಫೋಟೋಗಳಲ್ಲಿ ಮಕ್ಕಳನ್ನು ಬಳಸಿಕೊಂಡಿರುವುದು ಸ್ಪಷ್ಟವಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!