July 9, 2026
Thursday, July 9, 2026
spot_img

‘ಮಕ್ಕಳ ಮೇಲಿನ ದೌರ್ಜನ್ಯ ಸಹಿಸೋದಿಲ್ಲ’: ಕೊಯಮತ್ತೂರು ಪ್ರಕರಣಕ್ಕೆ ಸಿಎಂ ವಿಜಯ್ ಗರಂ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿನ ಕೊಯಮತ್ತೂರಿನಲ್ಲಿ 10 ವರ್ಷದ ಬಾಲಕಿಯ ಅಪಹರಣ ಮತ್ತು ಹತ್ಯೆ ಪ್ರಕರಣ ರಾಜ್ಯದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದು, ಮುಖ್ಯಮಂತ್ರಿ ವಿಜಯ್ ಕಠಿಣ ಪ್ರತಿಕ್ರಿಯೆ ನೀಡಿದ್ದಾರೆ.

ಮಹಿಳೆಯರು ಹಾಗೂ ಮಕ್ಕಳ ಮೇಲಿನ ದೌರ್ಜನ್ಯಗಳಲ್ಲಿ ತೊಡಗಿರುವವರಿಗೆ ಕಾನೂನಿನಡಿ ಕಠಿಣ ಶಿಕ್ಷೆ ಖಚಿತ ಎಂದು ಅವರು ಎಚ್ಚರಿಸಿದ್ದಾರೆ.

“ಇದು ಅಮಾನವೀಯ ಕೃತ್ಯ”

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಸಿಎಂ ವಿಜಯ್, “ಇಂತಹ ಅಮಾನವೀಯ ಮತ್ತು ಕ್ಷಮಿಸಲಾಗದ ಅಪರಾಧಗಳನ್ನು ಸಮಾಜ ಒಪ್ಪಲಾರದು” ಎಂದು ಹೇಳಿದ್ದಾರೆ. ಬಾಲಕಿಯ ಕುಟುಂಬದ ದುಃಖದಲ್ಲಿ ತಾವೂ ಭಾಗಿಯಾಗಿರುವುದಾಗಿ ತಿಳಿಸಿದ ಅವರು, ಪ್ರಕರಣದ ತನಿಖೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ಇಬ್ಬರು ಆರೋಪಿಗಳ ಬಂಧನ

ಈ ಪ್ರಕರಣದಲ್ಲಿ ಕಾರ್ತಿಕ್ ಮತ್ತು ಮೋಹನ್ ರಾಜ್ ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿ ಸಾವಿಗೆ ಮುನ್ನ ಲೈಂಗಿಕ ದೌರ್ಜನ್ಯ ನಡೆದಿದೆಯೇ ಎಂಬ ಕುರಿತು ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಿನಸಿ ಅಂಗಡಿಗೆ ಹೋದ ಬಾಲಕಿ ಮರಳಲೇ ಇಲ್ಲ

ಮೇ 21ರಂದು ಸುಲೂರು ಪ್ರದೇಶದಲ್ಲಿ ಐದನೇ ತರಗತಿ ವಿದ್ಯಾರ್ಥಿನಿ ಸಮೀಪದ ಅಂಗಡಿಗೆ ತೆರಳಿದ್ದಳು. ಆದರೆ ಬಹಳ ಹೊತ್ತಾದರೂ ಮನೆಗೆ ವಾಪಸ್ ಬಾರದೆ ಇದ್ದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹುಡುಕಾಟ ಆರಂಭಿಸಿದ್ದರು. ಬಳಿಕ ಕಣ್ಣಂಪಾಳಯಂ ಕೆರೆ ಸಮೀಪ ಬಾಲಕಿಯ ಶವ ಪತ್ತೆಯಾಗಿದ್ದು, ಪ್ರಕರಣ ರಾಜ್ಯದಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !