ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವು? : ಕಿಮ್ಸ್ ಆಸ್ಪತ್ರೆ ಎದುರು ಪೋಷಕರ ಪ್ರತಿಭಟನೆ

ದಿಗಂತ ವರದಿ ಹುಬ್ಬಳ್ಳಿ:

ವೈದ್ಯರ ನಿರ್ಲಕ್ಷ್ಯದಿಂದ ಎರಡು ವರ್ಷದ ಮಗು ಮೃತಪಟ್ಟಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಹೆಮಾಂಜಿಯೋಮಾ(ರಕ್ತನಾಳ ಗಂಟು) ಕಾಯಿಲೆಯಿಂದ ಬಳಲುತ್ತಿದ್ದ ಎರಡು ವರ್ಷದ ಮಗು(ರಕ್ಷಾ)ವಿಗೆ ವೈದ್ಯರು ಸರಿಯಾಗಿ ಶಸ್ತ್ರಚಿಕಿತ್ಸೆ ನಡೆಸದ ಕಾರಣ ಮಗು ಮೃತಪಟ್ಟಿದೆ ಎಂದು ಪೋಷಕರು ಆರೋಪಿಸಿ, ಕಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಎದುರು ಪ್ರತಿಭಟಿಸಿದ್ದಾರೆ.

ಮಗುವಿನ ಬಾಯಲ್ಲಿ ಹುಟ್ಟುತ್ತಲೇ ಗಂಟು ಇತ್ತು. ಎರಡು ವರ್ಷದ ನಂತರ ಅದನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆಯಲು ವೈದ್ಯರು ಸೂಚಿಸಿದ್ದರು. ಫೆ. 16 ರಂದು ಕಿಮ್ಸ್ ಗೆ ದಾಖಲಿಸಲಾಗಿತ್ತು. ಶಸ್ತ್ರಚಿಕಿತ್ಸೆ ಸಂದರ್ಭ ವೈದ್ಯರ ನಿರ್ಲಕ್ಷದಿಂದ ಮಗು ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದೆ ಎಂದು ತಾಜನಗರದ ಮಗುವಿನ ತಂದೆ ಸಂಜೀವ ಚೌಧರಿ ಆರೋಪಿಸಿದರು.

ನಮ್ಮಿಂದ ಅನುಮತಿ ಪಡೆಯದೇ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಶಸ್ತ್ರ ಚಿಕಿತ್ಸೆ ನಡೆಸಿದರೆ ಮಗು ಬದುಕಿರುವ ಸಾಧ್ಯತೆ ಬಗ್ಗೆಯೂ ಯಾವ ಮಾಹಿತಿ ನೀಡಿಲ್ಲ. ಆಸ್ಪತ್ರೆಗೆ ದಾಖಲಿಸಿದ ಸಂದರ್ಭ ಮಗಳು ಬೆಡ್ ಮೇಲೆ ನಗುತ್ತ ಚಟುವಟಿಕೆಯಿಂದಲೇ ಇದ್ದಳು. ವೈದ್ಯರ ನಿರ್ಲಕ್ಷ್ಯದಿಂದಾಗಿಯೇ ಅವಳು ಮೃತಪಟ್ಟಿದ್ದಾಳೆ ಎಂದು ತಾಯಿ ಕೀರ್ತಿ ಚೌಧರಿ ಆಕ್ರೋಶ ವ್ಯಕ್ತಪಡಿಸಿದರು.

ನಮ್ಮಿಂದ‌ ಯಾವುದೇ ನಿರ್ಲಕ್ಷ್ಯ ಆಗಿಲ್ಲ. ಮಗುವಿನ ಬಾಯಲ್ಲಿ ಗಂಟು ದೊಡ್ಡದಾಗಿತ್ತು. ನಮ್ಮ ವೈದ್ಯರಾದ ರಾಜಶೇಖರ ಅವರು ಪರೀಕ್ಷೆಗೆ ಒಳಪಡಿಸಿ, ಅದನ್ನು ರಕ್ತನಾಳ ಗಂಟು ಎಂದು ಪತ್ತೆ ಹಚ್ಚಿದ್ದರು. ಅದಕ್ಕೆ ಪ್ರಾಥಮಿಕ ಚಿಕಿತ್ಸೆ ಎಂದು ಒಂದು ಇಂಜೆಕ್ಸನ್ ಮಾಡಲಾಗಿತ್ತು. ಆಗ ಅಧಿಕ ರಕ್ತಸ್ರಾವ ಆಗಿದೆ. ಸುಚಿರಾಯು ಆಸ್ಪತ್ರೆಗೆ ಕಳುಹಿಸಿ ಎಂಬೊಲೈಸ್ ಮಾಡಿ ರಕ್ತ ಸ್ರಾವ ನಿಲ್ಲಿಸಲಾಗಿತ್ತು ಎಂದು ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!