August 13, 2026
Thursday, August 13, 2026
spot_img

ಕುರ್‌ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ ಮಗು ಸಾ*ವು: ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಗೌರಿಪುರ ಗ್ರಾಮದಲ್ಲಿ ಪ್ಲಾಸ್ಟಿಕ್ ಬಾಲ್ ಗಂಟಲಿಗೆ ಸಿಲುಕಿ ಐದು ವರ್ಷದ ಬಾಲಕ ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ಸಂತೋಷ್–ಐಶ್ವರ್ಯ ದಂಪತಿಯ ಪುತ್ರ ಮುಕುಂದ್ ಮಯೂರ್ ಮೃತಪಟ್ಟ ಬಾಲಕ.

ಮಗುವಿಗೆ ನೀಡಿದ್ದ ತಿಂಡಿಯ ಪ್ಯಾಕೆಟ್‌ನಲ್ಲಿದ್ದ ಸಣ್ಣ ಪ್ಲಾಸ್ಟಿಕ್ ಬಾಲ್ ಅನ್ನು ಬಾಯಿಗೆ ಹಾಕಿದ ವೇಳೆ ಅದು ಗಂಟಲಲ್ಲಿ ಸಿಲುಕಿದೆ. ಉಸಿರಾಟದ ತೊಂದರೆ ಕಾಣಿಸಿಕೊಂಡ ತಕ್ಷಣ ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ, ಮಾರ್ಗಮಧ್ಯೆಯೇ ಮಗು ಮೃತಪಟ್ಟಿದೆ.

ಮಕ್ಕಳ ಆಹಾರ ಉತ್ಪನ್ನಗಳೊಂದಿಗೆ ನೀಡಲಾಗುವ ಸಣ್ಣ ಪ್ಲಾಸ್ಟಿಕ್ ವಸ್ತುಗಳ ಬಗ್ಗೆ ಕಠಿಣ ನಿಯಮ ಜಾರಿಗೊಳಿಸಬೇಕು ಎಂಬ ಒತ್ತಾಯ ಸಾರ್ವಜನಿಕರಿಂದ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !