ಭಾರೀ ಮಳೆಯಿಂದ ದುರಂತ: ಮನೆ ಕುಸಿದು ಗಾಯಗೊಂಡಿದ್ದ ಮಗು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರೀ ಮಳೆಯಿಂದಾಗಿ ಮನೆ ಕುಸಿದು ಗಂಭೀರವಾಗಿ ಗಾಯಗೊಂಡಿದ್ದ ಮಗು ಸಾವನ್ನಪ್ಪಿರುವ ದುರಂತ ಘಟನೆ ಹಾವೇರಿ ತಾಲೂಕಿನ ಮಾಳಪುರ ಗ್ರಾಮದಲ್ಲಿ ನಡೆದಿದೆ.

ಎರಡು ದಿನಗಳ ಹಿಂದೆ ಮನೆ ಕುಸಿದು ಗಾಯಗೊಂಡಿದ್ದ ಮೂರು ವರ್ಷದ ಮಗು ಭಾಗ್ಯಳನ್ನು ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಬಾಲಕಿ ಮೃತಪಟ್ಟಿದ್ದಾಳೆ.

ಈ ಕುರಿತು ಹಾವೇರಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!