Tuesday, June 28, 2022

Latest Posts

ಹಕ್ಕಿ ಜ್ವರಕ್ಕೆ ಬಾಲಕ ಬಲಿ: ದೇಶದಲ್ಲಿ ಈ ವರ್ಷದ ಮೊದಲ ಪ್ರಕರಣ ದಾಖಲು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಹಕ್ಕಿ ಜ್ವರದಿಂದ 11 ವರ್ಷದ ಬಾಲಕ ಮೃತಪಟ್ಟಿದ್ದು, ದೇಶದಲ್ಲಿ ಈ ವರ್ಷ ದಾಖಲಾದ ಮೊದಲ ಹಕ್ಕಿ ಜ್ವರದ ಸಾವು ಇದಾಗಿದೆ ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ವರದಿ ಮಾಡಿದೆ.

ದೆಹಲಿಯ ಏಮ್ಸ್ ಆಸ್ಪತ್ರೆಗೆ ಜುಲೈ 2ರಂದು 11 ವರ್ಷದ ಬಾಲಕನನ್ನು ದಾಖಲು ಮಾಡಲಾಗಿತ್ತು. ಹೆಚ್‌5ಎನ್‌1 ವೈರಸ್ ಸೋಂಕು ಬಾಲಕನಿಗೆ ತಗುಲಿತ್ತು. ವಿಶೇಷ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಮಂಗಳವಾರ ಮೃತಪಟ್ಟಿದ್ದಾನೆ. ಬಾಲಕನ ಸಂಪರ್ಕಕ್ಕೆ ಬಂದಿರುವ ಆರೋಗ್ಯ ಸಿಬ್ಬಂದಿಗೆ ಮತ್ತು ಕುಟುಂಬದವರು ಆರೋಗ್ಯ ಹಾಗೂ ಲಕ್ಷಣಗಳ ಬಗ್ಗೆ ನಿಗಾ ವಹಿಸಬೇಕೆಂದು ಏಮ್ಸ್ ಅಧಿಕಾರಿಗಳು ಹೇಳಿದ್ದಾರೆ

ಏಕೆಂದರೆ ಹಕ್ಕಿಗಳಿಂದ ಹರಡುವ ಈ ರೋಗ ಮನುಷ್ಯರಿಂದ ಮನುಷ್ಯರಿಗೂ ಹರಡುವ ಸಾಮರ್ಥ್ಯ ಹೊಂದಿದೆ. ಸೋಂಕು ತಗುಲಿದರೆ ಮರಣ ಪ್ರಮಾಣ ಶೇ.60 ರಷ್ಟು ಹೆಚ್ಚಾಗಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss