ಮಗು ಕಿಡ್ನ್ಯಾಪ್‌ ಕೇಸ್: ಅಪರಾಧಿಗೆ 10 ವರ್ಷ ಜೈಲು, 1 ಲಕ್ಷ ರೂ. ದಂಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ನವಜಾತ ಶಿಶು ಕಿಡ್ನ್ಯಾಪ್‌ ಪ್ರಕರಣದ ಅಪರಾಧಿಗೆ ಕೋರ್ಟ್ 10 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿದೆ.

ಅಪರಾಧಿ ರಶ್ಮಿ, 5 ವರ್ಷಗಳ ಹಿಂದೆ ವಾಣಿ ವಿಲಾಸ ಆಸ್ಪತ್ರೆಯಿಂದ ಆಗ ತಾನೆ ಹುಟ್ಟಿದ್ದ ನವಾಜಾತ ಶಿಶುವನ್ನ ಕಿಡ್ನ್ಯಾಪ್‌ ಮಾಡಿದ್ದಳು. ಪ್ರಕರಣದ ಅಪರಾಧಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ ವಿಧಿಸಿ ಸಿಸಿಹೆಚ್ 51ರ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಚಾಮರಾಜಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣ ಬಸವನಗುಡಿ ಮಹಿಳಾ ಠಾಣೆಗೆ ವರ್ಗಾವಣೆಯಾಗಿತ್ತು. ತಲೆಮರೆಸಿಕೊಂಡಿದ್ದ ರಶ್ಮಿಯನ್ನು 1 ವರ್ಷದ ಬಳಿಕ ಮಹಿಳಾ ಠಾಣೆ ಇನ್ಸ್‌ಪೆಕ್ಟರ್‌ ಮೀನಾಕ್ಷಿ ಮತ್ತು ಅವರ ತಂಡ ಬಂಧಿಸಿ, ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸಿದ್ದರು. ಇದೀಗ ಕೋರ್ಟ್‌ನಲ್ಲಿ ವಿಚಾರಣೆ ಮುಗಿದಿದ್ದು, ಅಪರಾಧಿಗೆ ಶಿಕ್ಷೆ ವಿಧಿಸಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!