ಒಂದನೇ ತರಗತಿ ಪ್ರವೇಶಕ್ಕೆ ಮಗುವಿಗೆ ಆರು ವರ್ಷ ಕಡ್ಡಾಯ, ಪೋಷಕರಿಗೆ ತಲೆಬಿಸಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಒಂದನೇ ತರಗತಿ ಪ್ರವೇಶಾತಿಗೆ 2025-26ನೇ ಸಾಲಿನಿಂದ ಮಕ್ಕಳ ಕನಿಷ್ಠ ವಯೋಮಿತಿಯನ್ನು6 ವರ್ಷಕ್ಕೆ ನಿಗದಿ ಮಾಡಿರುವುದು ಮತ್ತು ಎಲ್‌ಕೆಜಿಗೆ  ದಾಖಲಿಸಲು ಮಕ್ಕಳ ವಯಸ್ಸು ಜೂನ್ 1 ರೊಳಗೆ 4 ವರ್ಷ ಆಗಿರಬೇಕು ಎಂಬ ನಿಯಮಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ಹೊಸ ನಿಯಮ ಅವೈಜ್ಞಾನಿಕ ಮತ್ತು ಅನ್ಯಾಯ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕಟ್ಟುನಿಟ್ಟಿನ ವಯೋಮಿತಿಗಳು ಮಕ್ಕಳನ್ನು ಸಕಾಲಿಕ ಶಿಕ್ಷಣದಿಂದ ವಂಚಿತಗೊಳಿಸುತ್ತಿವೆ. ಅದರಲ್ಲೂ ವಿಶೇಷವಾಗಿ ಕೇವಲ ಒಂದು ದಿನದ ಅಂತರದಲ್ಲಿ ವಯಸ್ಸು ಪೂರ್ಣಗೊಂಡಿರದಿದ್ದರೆ ಅಂಥ ಮಕ್ಕಳಿಗೆ ಅನ್ಯಾಯವಾಗುತ್ತದೆ. ಅಂಥ ಮಕ್ಕಳು ಇಡೀ ವರ್ಷ ಶಾಲಾ ಶಿಕ್ಷಣದಿಂದ ವಂಚಿತರಾಗುತ್ತಾರೆ ಎಂದು ಪೋಷಕರು ಹೇಳಿದ್ದು, ನಿಯಮದಲ್ಲಿ ಸಡಿಲಿಕೆಗೆ ಒತ್ತಾಯಿಸಿದ್ದಾರೆ. ಆದರೆ ಸರ್ಕಾರ ಈ ಬಗ್ಗೆ ಯಾವುದೇ ಸಡಿಲಿಕೆ ನೀಡಿಲ್ಲ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!