ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರತಿಪಕ್ಷಗಳ ವಿರೋಧದ ನಡುವೆಯೂ ಮಹಿಳೆಯರ ಮದುವೆಯ ವಯಸ್ಸನ್ನು 18 ವರ್ಷದಿಂದ 21 ವರ್ಷಕ್ಕೆ ಹೆಚ್ಚಿಸುವ ಬಾಲ್ಯ ವಿವಾಹ ನಿಷೇಧ (ತಿದ್ದುಪಡಿ) ವಿಧೇಯಕ -2021 ಅನ್ನು ಲೋಕಸಭೆಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಮಂಡಿಸಿದರು.
ನಮ್ಮ ದೇಶದಲ್ಲಿ ಮಹಿಳಾ ಸಮಾನತೆ ತರಬೇಕಾದ ಅವಶ್ಯಕತೆ ಇದೆ. ವಿಭಿನ್ನ ನಂಬಿಕೆಗಳ ವಿಭಿನ್ನ ವಿವಾಹ ಕಾನೂನುಗಳನ್ನು ಆಹ್ವಾನಿಸಿ, ತಿದ್ದುಪಡಿ ಮಸೂದೆಯನ್ನು ಪರಿಚಯಿಸಲು ನಿಂತಿದ್ದೇನೆ ಎಂದು ಹೇಳಿದರು.
ಆದರೆ, ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ, ಗೌರವ್ ಗೊಗೊಯ್, ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ, ತೃಣಮೂಲ ಕಾಂಗ್ರೆಸ್ನ ಸೌಗತ ರಾಯ್ ಸೇರಿದಂತೆ ವಿರೋಧ ಪಕ್ಷದ ನಾಯಕರು ಮಸೂದೆಗೆ ಆಕ್ಷೇಪ ವ್ಯಕ್ತಪಡಿಸಿದರು.