ಸ್ಕೂಟರ್ ಫುಟ್‌ರೆಸ್ಟ್‌ನಲ್ಲಿ ಮಗು ನಿಲ್ಲಿಸಿಕೊಂಡು ಸವಾರಿ: ಪೋಷಕರ ವಿರುದ್ಧ ಎಫ್‌ಐಆರ್‌ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜಧಾನಿ ಬೆಂಗಳೂರಿನ ವೈಟ್‌ಫೀಲ್ಡ್‌ ಏರಿಯಾದಲ್ಲಿ ಪೋಷಕರು ತಮ್ಮ ಮಗನನ್ನು ಫುಟ್‌ರೆಸ್ಟ್‌ ಮೇಲೆ ನಿಲ್ಲಿಸಿಕೊಂಡು ಹೋಗಿದ್ದಾರೆ. ಪೋಷಕರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಹಿಂಬದಿಯಿಂದ ಬರುತ್ತಿದ್ದ ಪ್ರಯಾಣಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆದ ನಂತರ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ವಿಡಿಯೋ ಎರಡು ಲಕ್ಷಕ್ಕೂ ಹೆಚ್ಚು ವೀಕ್ಷಣೆ ಕಂಡಿದೆ. ಸಾಮಾಜಿಕ ಮಾಧ್ಯಮ ಬಳಕೆದಾರರು ದಂಪತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 ಇವರು ಕೇರಳ ಮೂಲದ ದಂಪತಿಯಾಗಿದ್ದು, ಹೆಲ್ಮೆಟ್ ಕೂಡ ಧರಿಸಿರಲಿಲ್ಲ. ಮಹದೇವಪುರ ಸಂಚಾರಿ ಠಾಣೆ ಪೊಲೀಸರು ದಂಪತಿ ವಿರುದ್ಧ ಮಂಗಳವಾರ ಎಫ್‌ಐಆರ್ ದಾಖಲಿಸಿದ್ದಾರೆ. ವಿಡಿಯೋದಲ್ಲಿ ವಾಹನದ ನೋಂದಣಿ ಸಂಖ್ಯೆಯನ್ನು ನಮೂದಿಸಿದ್ದು, ಪೊಲೀಸರು ಸ್ಕೂಟರ್‌ ಸವಾರರನ್ನು ಕಂಡುಹಿಡಿದು ಠಾಣೆಗೆ ಕರೆಸಿದ್ದಾರೆ.

ಪೊಲೀಸ್ ಠಾಣೆಗೆ ಬಂದ ದಂಪತಿ, ತಮ್ಮ ಮಗ ಸ್ಕೂಟರ್‌ನ ಫುಟ್‌ರೆಸ್ಟ್ ಮೇಲೆ ನಿಲ್ಲುವುದಾಗಿ ಹಠ ಮಾಡಿದನು. ತಮ್ಮ ಮಗನ ಎಂಟನೇ ಹುಟ್ಟುಹಬ್ಬದ ಕಾರಣ, ಆತನ ಆಸೆಯನ್ನು ಪೂರೈಸಲೆಂದು ಈ ರೀತಿ ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ. ದಂಪತಿ ವಿರುದ್ಧ ಐಪಿಸಿ ಸೆಕ್ಷನ್ 279ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ದಂಡ ಪಾವತಿಸಲು ಅವರು ನ್ಯಾಯವ್ಯಾಪ್ತಿಯ ಸಂಚಾರ ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!