Monday, October 20, 2025

ಹೈದರಾಬಾದ್‌ನಲ್ಲಿ ಸಿಕ್ಕಿಬಿದ್ದ ಮಕ್ಕಳ ಕಳ್ಳರು, 6 ಮಕ್ಕಳ ರಕ್ಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹೈದರಾಬಾದ್‌ನಲ್ಲಿ ಐದು ವರ್ಷಗಳಿಂದ ನಡೆಯುತ್ತಿದ್ದ ಮಕ್ಕಳ ಅಪಹರಣ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಐವರು ಆರೋಪಿಗಳನ್ನು ಬಂಧಿಸಲಾಗಿದ್ದು, ಆರು ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಐದು ವರ್ಷದೊಳಗಿನ ಮಕ್ಕಳನ್ನು ಗುರಿಯಾಗಿಸಿಕೊಂಡು ಹೈದರಾಬಾದ್, ಸೈಬರಾಬಾದ್ ಮತ್ತು ಸಂಗರೆಡ್ಡಿ ಜಿಲ್ಲೆಗಳಲ್ಲಿ ಈ ಗ್ಯಾಂಗ್ ಕಾರ್ಯನಿರ್ವಹಿಸುತ್ತಿತ್ತು. ಈ ಗ್ಯಾಂಗ್ ಹೆಚ್ಚು ಮಕ್ಕಳನ್ನು ಹೊಂದಿರುವ ಕಾರ್ಮಿಕ ವರ್ಗದ ಪೋಷಕರನ್ನು ಗುರಿಯಾಗಿಸಿಕೊಂಡು ಅಪಹರಣ ದಂಧೆಯಲ್ಲಿ ತೊಡಗಿತ್ತು. ಅಪಹರಣ ಮಾಡಿದ ಮಕ್ಕಳನ್ನು, ಮಕ್ಕಳಿಲ್ಲದವರಿಗೆ 1 ಲಕ್ಷದಿಂದ 7 ಲಕ್ಷ ರೂ.ಗಳವರೆಗೆ ಮಾರಾಟ ಮಾಡಿದ್ದಾರೆ ಎನ್ನಲಾಗಿದೆ.

4 ವರ್ಷದ ಬಾಲಕನ ಅಪಹರಣಕ್ಕೆ ಸಂಬಂಧಿಸಿದ ದೂರಿನ ನಂತರ ಆ.26 ರಂದು ತನಿಖೆ ಪ್ರಾರಂಭಿಸಲಾಗಿತ್ತು. ಪೊಲೀಸರು ತೀವ್ರ ಹುಡುಕಾಟ ನಡೆಸಿದಾಗ, ಪ್ರಮುಖ ಆರೋಪಿ ಚಿಲುಕುರಿ ರಾಜು ಎಂಬಾತನ ಸುಳಿವು ಸಿಕ್ಕಿತ್ತು. ಈತ ಆಯುರ್ವೇದ ವೈದ್ಯನಾಗಿದ್ದು, ಪ್ರಕರಣದ ಮಾಸ್ಟರ್ ಮೈಂಡ್ ಇವನೇ ಆಗಿದ್ದ. ಈತ ಸಹಚರರ ಜೊತೆ ಸೇರಿ ಮಕ್ಕಳ ಮಾರಾಟ ಜಾಲ ನಡೆಸುತ್ತಿದ್ದ ಎಂದು ತಿಳಿದುಬಂದಿದೆ.

error: Content is protected !!