Monday, August 15, 2022

Latest Posts

ಪುಟ್ಟ ಮಕ್ಕಳನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಹೊಸದಿಗಂತ ವರದಿ, ಮಂಗಳೂರು:

ಪುಟ್ಟ ಮಕ್ಕಳನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಮೂಲ್ಕಿ ನಿವಾಸಿಯಾದ ರಾಯನ್ (30) ಬಂಧಿತ ಆರೋಪಿ.
ಆರೋಪಿ ರಾಯನ್ ಹಾಸನದ ಒoದು ಮಗುವನ್ನು ಕಾರ್ಕಳದಲ್ಲಿ 5 ಲಕ್ಷಕ್ಕೆ ಮಾರಾಟ ಮಾಡಿದ್ದ. ಈ ಹಿನ್ನೆಲೆಯಲ್ಲಿ ಇಬ್ಬರು ಮಹಿಳೆಯರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ.

3-4 ತಿಂಗಳಿನ ಮಕ್ಕಳನ್ನು ಕಾನೂನು ಬಾಹಿರವಾಗಿ ಸಾಗಾಟ ಮಾಡಿ ಮಾರಾಟ ಮಾಡುತ್ತಿರುವ ಜಾಲದ ಬಗ್ಗೆ ಮಾಹಿತಿಯನ್ನು ಪಡೆದ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಕದ್ರಿ ವ್ಯಾಪ್ತಿಯ ಡಿಂಕಿ ಡೈನ್ ಹೋಟೇಲ್ ನಲ್ಲಿ ವಶಕ್ಕೆ ಪಡೆಯಲಾಗಿದೆ.

ಆತನನ್ನು ವಿಚಾರಿಸಿ ಸಾಗಾಟ ಮತ್ತು ಮಾರಾಟ ಮಾಡಿರುವ ಮಗುವಿನ ಬಗ್ಗೆ ಪೊಲೀಸರು ಮಾಹಿತಿಯನ್ನು ಪಡೆದಿದ್ದು ತನಿಖೆ ಮುಂದುವರಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss