ಹೊಸದಿಗಂತ ಡಿಜಿಟಲ್ ಡೆಸ್ಕ್:
ಸುಮಾರು 35 ಅಡಿ ಆಳದ ತೆರೆದ ಕೊಳವೆ ಬಾವಿಗೆ ಬುಧವಾರ ಬಿದ್ದಿದ್ದ ಎರಡು ವರ್ಷದ ಮಗುವನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ಗುರುವಾರ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಾಜಸ್ಥಾನದ ದೌಸಾದಲ್ಲಿ ಈ ಘಟನೆ ನಡೆದಿದೆ. ರಕ್ಷಣೆ ನಂತರ ಬಾಲಕಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳಿಂದ ಬಾಲಕಿ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಎಸ್‌ಪಿ ರಂಜಿತಾ ಶರ್ಮಾ ತಿಳಿಸಿದ್ದಾರೆ.
18 ಗಂಟೆಗಳ ರಕ್ಷಣಾ ಕಾರ್ಯಾಚರಣೆ ಬಳಿಕ ಬಾಲಕಿಯನ್ನು ಬೋರ್‌ವೆಲ್‌ನಿಂದ ರಕ್ಷಿಸಲು ಸಾಧ್ಯವಾಯಿತು. ಇದು ತುಂಬಾ ಕಷ್ಟದ ಕೆಲಸವಾಗಿತ್ತು. ಆದರೆ NDRF ಮತ್ತು SDRF ತಂಡಗಳ ನೆರವಿನಿಂದ ಯಶಸ್ವಿ ಕಾರ್ಯಾಚರಣೆ ನಡೆಸಲಾಗಿದ್ದು, ಬಾಲಕಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್ಪಿ ಹೇಳಿದರು.