October 9, 2026
Friday, October 9, 2026
spot_img

ಬಿಸಿಯೂಟ ಸೇವಿಸಿದ ಮಕ್ಕಳಿಗೆ ವಾಂತಿ-ಭೇದಿ, ಸಾರ್ವಜನಿಕ ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಾಗಲಕೋಟೆಯ ಮುಧೋಳ ತಾಲೂಕಿನ ಮುಗಳಖೋಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ನಂತರ 12 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಊಟ ಮಾಡಿದ ಸ್ವಲ್ಪ ಹೊತ್ತಿನಲ್ಲೇ ಮಕ್ಕಳಿಗೆ ವಾಂತಿ, ಭೇದಿ ಆರಂಭವಾಗಿದೆ. ಎಚ್ಚೆತ್ತ ಶಿಕ್ಷಕರು ತಕ್ಷಣವೇ ಮಕ್ಕಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಎಲ್‌ಕೆಜಿಯಿಂದ ಒಟ್ಟಾರೆ ಏಳನೇ ತರಗತಿವರೆಗೆ ಒಟ್ಟು 51 ಮಕ್ಕಳು ಊಟ ಮಾಡಿದ್ದಾರೆ. ಇದರಲ್ಲಿ 14 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ಮಕ್ಕಳ ಪೈಕಿ 9 ಮಂದಿಯನ್ನು ಮುಧೋಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ 3 ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆ ಆಸ್ಪತ್ರೆಗೆ ರವಾನಿಸಲಾಗಿದೆ.

ಸಂಬಂಧಪಟ್ಟ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದು ಪರಿಶೀಲನೆ ನಡೆಸಿದ್ದಾರೆ. ಸದ್ಯ ಚಿಕಿತ್ಸೆ ಪಡೆಯುತ್ತಿರುವ ಎಲ್ಲಾ ಮಕ್ಕಳು ಚೇತರಿಸಿಕೊಳ್ಳುತ್ತಿದ್ದು, ವೈದ್ಯರು ಅವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ. ಊಟದಲ್ಲಿ ಏನಾದ್ರೂ ಬಿದ್ದಿತ್ತಾ? ಊಟ ಮಾಡಿದ ಎಲ್ಲ ಮಕ್ಕಳಿಗೂ ಸಮಸ್ಯೆ ಆಗದೇ ಕೆಲವೇ ಮಕ್ಕಳಿಗೆ ಹೀಗೆ ಆಗಿದ್ದು ಏಕೆ ಎಂಬೆಲ್ಲ ಮಾಹಿತಿ ಕಲೆಹಾಕಲಾಗುತ್ತಿದೆ.

Must Read